ಸ್ಯಾಂಡಲ್ ವುಡ್ ಗೋಲ್ಡನ್ ಗರ್ಲ್ ಅಮೂಲ್ಯ ತಾಯಿಯಾಗುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು ಇನ್ಮುಂದೆ ನಾವಿಬ್ಬರಲ್ಲ ಅಂದಿದ್ದಾರೆ. ಈ ಬಗ್ಗೆ ಮುದ್ದಾದ ಫೋಟೋ ಶೂಟ್ ಮಾಡಿಸಿಕೊಂಡಿರುವ ಅಮೂಲ್ಯ ಸಂತಸವನ್ನು ಹಂಚಿಕೊಂಡಿದ್ದಾರೆ.
2017ರ ಮೇ 12 ರಂದು ಅಮೂಲ್ಯ ಮತ್ತು ಜಗದೀಶ್ ವಿವಾಹ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠದಲ್ಲಿ ನಡೆದಿತ್ತು. ಮದುವೆಯ ಬಳಿಕ ಚಂದನವನದಿಂದ ದೂರ ಸರಿದಿದ್ದ ಅಮೂಲ್ಯ ಪತಿ ಜಗದೀಶ್ ಜೊತೆ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದರು.
Discussion about this post