ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೆ ತೀವ್ರವಾಗುತ್ತಿರುವ ಹಿನ್ನಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಈಗಾಗಲೇ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಹಲವು ಸಲಹೆಗಳನ್ನು ರಾಜ್ಯ ಸರ್ಕಾರಕ್ಕೆ ನೀಡಿದೆ.
ಈ ನಡುವೆ ಕೊರೋನಾ ಮೂರನೇ ಅಲೆಯ ಭೀತಿಯ ಹಿನ್ನಲೆಯಲ್ಲಿ ಬೆಂಗಳೂರನ್ನು ರೆಡ್ ಝೋನ್ ( Red Zone ) ಎಂದು ಕೇಂದ್ರ ಸರ್ಕಾರ ಗುರುತಿಸಿದೆ. ಹೀಗಾಗಿ ಈಗ ಜಾರಿಯಲ್ಲಿರುವ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಈ ವಾರ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದು, ನೈಟ್ ಕರ್ಫ್ಯೂ ವಿಸ್ತರಣೆ ಹಾಗೂ ವಾರಾಂತ್ಯ ಕರ್ಫ್ಯೂ ಮತ್ತು lockdown ಹೇರಿಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಈ ನಡುವೆ ಲಾಕ್ ಡೌನ್ ಮುನ್ನೆಚ್ಚರಿಕೆ ಕೊಟ್ಟಿರುವ ಮುಖ್ಯಮಂತ್ರಿಗಳು ಹಾಗೂ ಸಚಿವ ಆರ್ ಅಶೋಕ್, ಲಾಕ್ ಕೀ ಜನರ ಕೈಯಲ್ಲಿದೆ. ಜನ ಅಗತ್ಯ ಮುನ್ನೆಚ್ಚರಿಕೆ ಕೈಗೊಂಡ್ರೆ ಕೊರೋನಾ ನಿಯಂತ್ರಿಸುವುದು ಸವಾಲಿನ ಕೆಲಸವಲ್ಲ. ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಅಗತ್ಯ ಎಚ್ಚರಿಕೆ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಒಂದು ವೇಳೆ ಜನ ಸಹಕಾರಿ ತೋರಿಸದಿದ್ರೆ ಪಶ್ಚಿಮ ಬಂಗಾಳ ಹಾಗೂ ಮುಂಬೈ ಮಾದರಿಯಲ್ಲಿ ಬೆಂಗಳೂರನ್ನು ಕೂಡಾ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಅಶೋಕ್ ಹೇಳಿಕೆ ಗಮನಿಸಿದರೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾಗುವುದರಲ್ಲಿ ಅನುಮಾನವಿಲ್ಲ. ಯಾಕಂದ್ರೆ ಅದ್ಯಾವ ಭಾಗದಲ್ಲೂ ಸಾಮಾಜಿಕ ಅಂತರ, ಮಾಸ್ಕ್ ಕಾಣಿಸುತ್ತಿಲ್ಲ. ಮಾತ್ರವಲ್ಲದೆ ರಾಜಕೀಯ, ಧಾರ್ಮಿಕ ಸಭೆ ಸಮಾರಂಭ ಎಗ್ಗಿಲ್ಲದೆ ಸಾಗಿದೆ.
Discussion about this post