ನವದೆಹಲಿ : 2017ರಲ್ಲಿ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದ ರಾಮನಾಥ ಕೋವಿಂದ್ ಅವರ ಅವಧಿ ಜುಲೈ 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನಲೆಯಲ್ಲಿ 15ನೇ ರಾಷ್ಟ್ರಪತಿಯ ಆಯ್ಕೆಗಾಗಿ ( President Election 2022 ) ಕೇಂದ್ರ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ.
ಆ ಪ್ರಕಾರ ದುಲೈ 18 ರಂದು ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಮತಗಳ ಎಣಿಕೆ ನಡೆಯಲಿದೆ. ಜುಲೈ 25 ರಂದು ನೂತನ ರಾಷ್ಟ್ರಪತಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೋಕಸಭೆ, ರಾಜ್ಯಸಭೆ ಹಾಗೂ ರಾಜ್ಯಗಳ ವಿಧಾನಸಭೆಯಲ್ಲಿ ಬಿಜೆಪಿ ಅತ್ಯಧಿಕ ಬೆಂಬಲ ಹೊಂದಿರುವ ಕಾರಣ, ಬಿಜೆಪಿ ಕಣಕ್ಕಿಳಿಸುವ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭೆಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಕಾಂಗ್ರೆಸ್ ಸೋಲುವ ಸಾಧ್ಯತೆ ಇದ್ದರೂ ತಮ್ಮ ಕಡೆಯ ಅಭ್ಯರ್ಥಿಯೊಬ್ಬರನ್ನು ರಾಷ್ಟ್ರಪತಿ ಚುನಾವಣೆಯ ಕಣಕ್ಕೆ ಇಳಿಸಲು ನಿರ್ಧರಿಸಿದೆ. ಈ ಬಗ್ಗೆ ಸೂಕ್ತ ಅಭ್ಯರ್ಥಿ ಹುಡುಕಾಟದ ಜವಾಬ್ದಾರಿಯನ್ನು ಮಲ್ಲಿಕಾರ್ಜುನ ಖರ್ಗೆಯವರಿಗೆ ವಹಿಸಲಾಗಿದೆ.
2017ರ ಜುಲೈ 17 ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ NDA ಕೋವಿಂದ್ ಅವರನ್ನು ಕಣಕ್ಕಿಳಿಸಿದರೆ, ಪ್ರತಿಪಕ್ಷ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರನ್ನು ಕಣಕ್ಕಿಳಿಸಿತ್ತು. 3,34,730 ಮತಗಳ ಅಂತರದಲ್ಲಿ ಮೀರಾ ಕುಮಾರ್ ಸೋಲು ಕಂಡಿದ್ದರು.
Discussion about this post