ಕುಮಟಾ : ಪ್ರವಾಸಕ್ಕೆಂದು ಬೆಂಗಳೂರಿನಿಂದ ಬಂದಿದ್ದ ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ, ತೇಜಸ್ ಡಿ., ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಪೈಕಿ ಅರ್ಜುನ್, ಚೈತ್ರಶ್ರೀ ಅವರ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ.
87 ಮಂದಿ ವಿದ್ಯಾರ್ಥಿಗಳ ತಂಡವೊಂದು ಪ್ರವಾಸಕ್ಕೆಂದು ಬೆಂಗಳೂರಿನಿಂದ ಉತ್ತರ ಕನ್ನಡದ ಕುಮಟಾ ತಾಲೂಕಿನ ಸಿಲ್ವರ್ ಸ್ಯಾಂಡ್ ರೆಸಾರ್ಟ್ಗೆ ಆಗಮಿಸಿತ್ತು. ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿಗಳ ಪೈಕಿ ಕೆಲವರು ಸಮುದ್ರ ದಡಕ್ಕೆ ತೆರಳಿ ನೀರಿಗಿಳಿದಿದ್ದರು. ಈ ವೇಳೆ ನಾಲ್ವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ಸಮುದ್ರದ ತೆರೆಗಳೊಂದಿಗೆ ಆಟವಾಡಬೇಡಿ, ಯಾವುದೇ ಕ್ಷಣದಲ್ಲಿ ಏನೂ ಬೇಕಾದರೂ ಸಂಭವಿಸಬಹುದು ಅನ್ನುವುದಕ್ಕೆ ಹಲವು ಘಟನೆಗಳು ಸಾಕ್ಷಿಯಾಗಿದೆ. ಹಾಗಿದ್ದ ಮೇಲೂ ಸಮುದ್ರದ ಜೊತೆಗೆ ಆಟವಾಡಲು ಹೋಗುತ್ತಿರುವುದು ನಿಜಕ್ಕೂ ದುರಂತವೇ ಸರಿ,
ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿದೆ ಹಾಗಿದ್ದ ಮೇಲೂ ನಾವು ಎಚ್ಚೆತ್ತುಕೊಳ್ಳದಿರುವುದು ನಮ್ಮ ನಿರ್ಲಕ್ಷ್ಯಕ್ಕೆ ಕೈಗನ್ನಡಿ.
Discussion about this post