ಮೋದಿ ಸ್ವಾಗತಿಸಲು ವಿಮಾನ ನಿಲ್ದಾಣ ಆಗಮಿಸಿದ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್
ನವದೆಹಲಿ : ಜರ್ಮನಿ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ ಯುಎಇ ಪ್ರವಾಸ ಪ್ರಾರಂಭಿಸಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ( Narendra Modi ) ಅಬುಧಾಬಿಗೆ ಬಂದಿಳಿದಿದ್ದು ವಿಮಾನ ನಿಲ್ದಾಣದಲ್ಲಿ ಆಗಮಿಸಿದ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ( Mohammed bin Zayed Al Nahyan ) ಪ್ರಧಾನಿಗಳನ್ನು ಸ್ವಾಗತಿಸಿದ್ದಾರೆ.
ಎರಡು ದಿನಗಳ ಪ್ರವಾಸದ ಅವಧಿಯಲ್ಲಿ ಹಲವು ಮಹತ್ವದ ವಿಚಾರಗಳ ಕುರಿತಂತೆ ಚರ್ಚೆ ನಡೆಯಲಿದೆ. ಜೊತೆಗೆ ಕೆಲ ಒಪ್ಪಂದಗಳಿಗೂ ಉಭಯ ನಾಯಕರು ಸಹಿ ಹಾಕಲಿದ್ದಾರೆ. ಇನ್ನು ಮೇ 13 ರಂದು ನಿಧನರಾಗಿರುವ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಿದ್ದಾರೆ.
ಪ್ರವಾದಿ ಪೈಗಂಬರ್ ಕುರಿತಂತೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ ಸಂದರ್ಭದಲ್ಲಿ ಯುಎಇ ಗರಂ ಆಗಿತ್ತು. ಆದರೆ ಟೀಮ್ ಮೋದಿ ಅದನ್ನು ಶೀಘ್ರ ಶಮನಗೊಳಿಸುವಲ್ಲಿ ಯಶಸ್ವಿಯಾಗಿತ್ತು.
ಇನ್ನು ಯುಎಇ ಹಾಗೂ ಭಾರತದ ಸಂಬಂಧ ವೃದ್ಧಿಯಲ್ಲಿ ಮೋದಿ ಪ್ರಮುಖ ಪಾತ್ರ ವಹಿಸಿದ್ದರು.
ಶೇಖ್ ಖಲೀಫಾ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯುಎಇ ಪರಮೊಚ್ಛ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕಾಶ್ಮೀರಕ್ಕಿದ್ದ ವಿಶೇಷಾಧಿಕಾರ ರದ್ದು ಮಾಡುವ ನಿರ್ಧಾರವನ್ನು ಕೂಡ ಯುಎಇ ಅಂದು ಸ್ವಾಗತ ಮಾಡಿತ್ತು
Discussion about this post