ಕಳೆದ 3 ತಿಂಗಳಿನಿಂದ ಈಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಅನ್ನಲಾಗಿದೆ
ಕೊಪ್ಪಳ : ಚಲಿಸುತ್ತಿದ್ದ ರೈನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ, ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಬಳ್ಳಾರಿ ಮೂಲಕ ತೇಜಶ್ರೀ ( 22) ಎಂದು ಗುರುತಿಸಲಾಗಿದೆ.
ಕೊಪ್ಪಳ ಕಿಡದಾಳ್ ರೈಲ್ವೆ ಗೇಟ್ ಬಳಿ ಜುಲೈ 2 ರಂದು ಸಂಜೆ ಹೊತ್ತಿಗೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ತೇಜಶ್ರೀ ಮೃತಪಟ್ಟಿದ್ದಾಳೆ.
ಈ ಸಂಬಂಧ ಗದಗ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Discussion about this post