ನವದೆಹಲಿ : ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Veerendra Heggade), ಕೇರಳದ ಮಾಜಿ ಅಥ್ಲೀಟ್ ಪಿಟಿ ಉಷಾ (PT Usha) , ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್ (V. Vijayendra Prasad ), ತಮಿಳುನಾಡಿನ ಇಳಯರಾಜ (Ilaiyaraaja) ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ( nominated for Rajya Sabha) ಮಾಡಲಾಗಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದು ಎಲ್ಲರಿಗೂ ಪ್ರತ್ಯೇಕವಾಗಿ ಶುಭ ಕೋರಿದ್ದಾರೆ. ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ನನಗೂ ಪ್ರಾರ್ಥನೆ ಸಲ್ಲಿಸುವ ಅವಕಾಶ ಸಿಕ್ಕಿತ್ತು. ಆರೋಗ್ಯ, ಶಿಕ್ಷಣ ಹಾಗೂ ಸಂಸ್ಕೃತಿ ವಿಚಾರದಲ್ಲಿ ಅವರು ಮಾಡುತ್ತಿರುವ ಕೆಲಸಕ್ಕೆ ನಾನು ಸಾಕ್ಷಿಯಾಗಿದ್ದೇನೆ ಅಂದಿದ್ದಾರೆ.
ಪಿಟಿ ಉಷಾ ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿದ್ದಾರೆ ಅಂದಿರುವ ಪ್ರಧಾನಿ ನರೇಂದ್ರ ಮೋದಿ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಕೆಲಸ ಶ್ಲಾಘನೀಯ ಅಂದಿದ್ದಾರೆ.
ನಿರ್ದೇಶಕ ರಾಜಮೌಳಿ ಅವರ ತಂದೆ ವಿ.ವಿಜಯೇಂದ್ರ ಪ್ರಸಾದ್ ಅವರ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ದಶಕಗಳಿಂದ ಸೃಜನಾತ್ಮಕ ಲೋಕದೊಂದಿಗೆ ನಂಟು ಹೊಂದಿರುವ ಅವರ ಕೆಲಸ ಭಾರತದ ವೈಭವ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಅಂದಿದ್ದಾರೆ.
ಇಳಯರಾಜ ಅವರನ್ನು ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಇಳೆಯರಾಜ ಅವರ ಸಂಗೀತ ಜನರನ್ನು ಮಂತ್ರಮುಗ್ಧರನ್ನಾಗಿಸಿದೆ ಅಂದಿದ್ದಾರೆ.
ಚಂದ್ರಶೇಖರ ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ಮರಳುತ್ತಿದ್ದ ಶ್ರೀಗಳ ಕಾರು ಅಪಘಾತ
ಧಾರವಾಡ ತಾಲೂಕಿನ ತೇಗೂರ ಬಳಿ ಕಾರು ಅಪಘಾತಕ್ಕೀಡಾಗಿದ್ದು, ( Car Accident ) ನಿಡಸೋಶಿ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ
ಧಾರವಾಡ : ಹುಬ್ಬಳ್ಳಿ ತಾಲೂಕಿನ ಸುಳ್ಳಾ ಗ್ರಾಮದಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ನಿಡಸೋಶಿಗೆ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಮರಳುತ್ತಿದ್ದರು. ಈ ವೇಳೆ ಧಾರವಾಡ ತಾಲೂಕಿನ ತೇಗೂರ ಬಳಿ , ( Car Accident ) ಶ್ರೀಗಳ ಕಾರು ಅಪಘಾತಕ್ಕೀಡಾಗಿದೆ.
ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಇದೀಗ ಶ್ರೀಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Discussion about this post