ಅಮೃತ ಸಿಂಧು ಅನ್ನುವ ಸಿನಿಮಾ ಇವರಿಗೆ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿತ್ತು. ( actor shivaranjan ) ಬಳಿಕ ಉದ್ಯಮಿಯಾಗಿ ಇವರು ಗುರುತಿಸಿಕೊಂಡಿದ್ದರು.
ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಹಿರಿಯ ಚಿತ್ರನಟ ಶಿವರಂಜನ್ ಬೋಳಣ್ಣವರ ( actor shivaranjan ) ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಅದೃಷ್ಪವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಲ್ಲಿನ ಹಳೆಯ ಹನುಮಂತ ದೇವಸ್ಥಾನ ಬಳಿ ಇರುವ ಅವರ ಮನೆ ಎದುರು ಈ ಘಟನೆ ನಡೆದಿದೆ. ಬೈಕ್ನಲ್ಲಿ ಬಂದ ಆರೋಪಿ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಆದರೆ ಗುರಿ ತಪ್ಪಿದ್ದರಿಂದ ಕೂದಲೆಳೆ ಅಂತರದಿಂದ ಶಿವರಂಜನ್ ಪಾರಾಗಿದ್ದಾರೆ.
ಇದನ್ನೂ ಓದಿ : Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ
ಘಟನೆ ನಡೆದ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಆರೋಪಿಯ ಬಂಧನಕ್ಕೆ 5 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಪ್ರಾರಂಭವಾಗಿದೆ.
ಶಿವರಂಜನ್ ಅಮೃತಸಿಂಧು, ರಾಜಾರಾಣಿ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದರು. ಅಮೃತಸಿಂಧು ಶಿವರಂಜನ್ ಅವರಿಗೆ ದೊಡ್ಡ ಹೆಸರು ತಂದುಕೊಟ್ಟಿತ್ತು.. 20 ವರ್ಷಗಳ ಹಿಂದೆ ಈ ಚಿತ್ರವನ್ನು ಶಿವರಂಜನ್ ಅವರ ತಂದೆಯೇ ನಿರ್ಮಾಣ ಮಾಡಿದ್ದರು.
ಇದನ್ನೂ ಓದಿ : rahul Gandhi : ಭಾರತ್ ಜೋಡೋ ಯಾತ್ರೆಯ ಸಭೆಯ ನಡುವೆಯೇ ಯುರೋಪ್ ಗೆ ಹಾರಿದ ರಾಹುಲ್
ಇದೀಗ ಉದ್ಯಮಿಯಾಗಿ ಗುರುತಿಸಿಕೊಂಡಿರುವ ಶಿವರಂಜನ್ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಿದ್ದಾರೆ. ಆಸ್ತಿ ವಿಚಾರದಲ್ಲಿ ಈ ದಾಳಿ ನಡೆದಿದೆ ಎಂದು ಪ್ರಾಥಮಿಕ ಮಾಹಿತಿಗಲು ತಿಳಿಸಿವೆ.
ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ
ಕರಾವಳಿಯ ರಾಹುಲ್, ಕರಾವಳಿ ಮೂಲದ ಸುನಿಲ್ ಶೆಟ್ಟಿಯ ಮಗಳನ್ನನು ಪ್ರೀತಿಸುತ್ತಿದ್ದಾರೆ kl rahul marriage
ಮುಂಬೈ : ಟೀಂ ಇಂಡಿಯಾ ಆಟಗಾರ, ಮಂಗಳೂರಿನ ಹುಡುಗ ಕೆ.ಎಲ್. ರಾಹುಲ್ ಮತ್ತು ಬಾಲಿವುಡ್ ನಟಿ, ಸುನಿಲ್ ಶೆಟ್ಟಿ ಪುತ್ರಿ ಆಥಿಯಾ ಶೆಟ್ಟಿ ವಿವಾಹ ( kl rahul marriage ) ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿದೆ.
ಕೆಎಲ್ ರಾಹುಲ್ ಮತ್ತು ಆಥಿಯಾ ಶೆಟ್ಟಿ ಇನ್ನು ಮೂರು ತಿಂಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಅನ್ನಲಾಗಿದೆ. ಈ ಸಂಬಂಧ ಮುಂಬೈನಲ್ಲಿ ಎರಡೂ ಕುಟುಂಬಗಳು ಭೇಟಿಯಾಗಿ ಮಾತುಕತೆ ನಡೆಸಿದ್ದು ಮುಂಬೈನಲ್ಲೇ ಮದುವೆ ನಡೆಸಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ : Pakistan journalist : ಪತ್ತೆದಾರಿಕೆ ಸಲುವಾಗಿಯೇ ಬೆಂಗಳೂರಿಗೆ ಬಂದಿದ್ದ ಪಾಕ್ ಪತ್ರಕರ್ತ
ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಹಾಗೂ ಕೆಎಲ್ ರಾಹುಲ್ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದಾರೆ. ಕಳೆದ ವರ್ಷ ಮೊದಲ ಬಾರಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದರು. ಜರ್ಮನಿಗೆ ಶಸ್ತ್ರಚಿಕಿತ್ಸೆ ಸಲುವಾಗಿ ರಾಹುಲ್ ತೆರಳಿದ ಸಂದರ್ಭದಲ್ಲೂ ಅಥಿಯಾ ಶೆಟ್ಟಿ ಜೊತೆಗೆ ಪ್ರಯಾಣಿಸಿದ್ದರು ಅನ್ನಲಾಗಿದೆ.
Discussion about this post