ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ, ಜನರ ಹಿತಾಸಕ್ತಿಯನ್ನು ಕಡೆಗಣಿಸಿದಂತಿದೆ. ಇನ್ನು ಮುಂದೆ ಸರ್ಕಾರಿ ಅಧಿಕಾರಿಗಳ ಲಂಚಾವತರ ( videos ban in govt offices ) ಬಯಲಿಗೆಳೆಯಲೂ ಸಾಧ್ಯವಿಲ್ಲ
ಬೆಂಗಳೂರು : ತಂತ್ರಜ್ಞಾನ ಸಾಕಷ್ಟು ಮುಂದುವರಿದಿದೆ. ಆದರೆ ರಾಜ್ಯ ಸರ್ಕಾರ ತಂತ್ರಜ್ಞಾನದ ಸದುಪಯೋಗಪಡಿಸಿಕೊಳ್ಳುವ ಲಕ್ಷಣ ಗೋಚರಿಸುತ್ತಿಲ್ಲ.ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಾರ್ವಜನಿಕರು ವಿಡಿಯೋ ಮಾಡುವಂತಿಲ್ಲ ( videos ban in govt offices ) ಅನ್ನುವ ಮೂಲಕ ಜನ ಸಾಮಾನ್ಯರಿಗೆ ಏಟು ಕೊಟ್ಟಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಸಾರ್ವಜನಿಕ ಸ್ಥಳದಲ್ಲೂ ಸರ್ಕಾರಿ ಅಧಿಕಾರಿಗಳು ಇರುವಾಗ ವಿಡಿಯೋ ಮಾಡುವಂತಿಲ್ಲ ಅನ್ನುವ ಆದೇಶ ಬಂದರೂ ಅಚ್ಚರಿ ಇಲ್ಲ. ಈ ಆದೇಶದಿಂದ ಇನ್ನು ಮುಂದೆ ಸರ್ಕಾರಿ ಅಧಿಕಾರಿಗಳು ಜನ ಸಾಮಾನ್ಯರಿಗೆ ಬಾಯಿಗೆ ಬಂದಂತೆ ಬೈಯ್ದರೂ ಸಾಕ್ಷಿ ಇರೋದಿಲ್ಲ.
ಈ ಆದೇಶಕ್ಕೆ ಪ್ರಮುಖ ಕಾರಣ ರವಿಕೃಷ್ಣಾ ರೆಡ್ಡಿ ನೇತೃತ್ವದ ಕೆ.ಆರ್.ಎಸ್ ಪಕ್ಷದ ಹೋರಾಟ ಅನ್ನಲಾಗಿದೆ. ಸರ್ಕಾರಿ ಕಚೇರಿಗಳ ಅವ್ಯವಸ್ಥೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವುದೇ ಇದೀಗ ರಾಜ್ಯ ಸರ್ಕಾರ ಕೆಂಗಣ್ಣಿಗೆ ಗುರಿಯಾಗಿದ್ದು, ಈ ಆದೇಶ ಹೊರ ಬಿದ್ದಿದೆ.
ಇದನ್ನೂ ಓದಿ : Roopa Hadagali : ಕಸದ ಲಾರಿಗೆ ದಂಪತಿ ಬಲಿ : ಹೆಣ್ಣು ಮಕ್ಕಳ ನೆರವಿಗೆ ಪಿಎಸ್ಐ ರೂಪಾ ಹಡಗಲಿ
ಆದೇಶದ ಪ್ರಕಾರ ಜಿಲ್ಲೆ, ತಾಲೂಕು ಮತ್ತು ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೆ ಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಹಾಗೂ ಇಂತಹ ಫೋಟೋ/ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗಿತ್ತಿರುವುದು ಹಾಗೂ ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಮಾಡದಂತೆ ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ-ವಿಡಿಯೋ ಮಾಡದಂತೆ ಆದೇಶಿಸಿದೆ.
ಈ ಆದೇಶದ ವಿರುದ್ಧ ಜನಸಾಮಾನ್ಯರು ಜಾಗೃತರಾಗಬೇಕಾಗಿದೆ. ತಮ್ಮ ತಮ್ಮ ಕ್ಷೇತ್ರದ ಶಾಸಕರು ಸಿಕ್ರೆ ಇಂತಹುದೊಂದು ಆದೇಶ ಬೇಕಿತ್ತಾ, ಮುಂದೆ ನೀವು ಗೆಲ್ಲಬೇಕಾದ್ರೆ ಈ ಆದೇಶ ಜಾರಿಯಾಗಬಾರದು ಅನ್ನಿ, ಆಗ ಖಂಡಿತಾ ರಾಜ್ಯ ಸರ್ಕಾರ ಈ ಆದೇಶವನ್ನು ಹಿಂಪಡೆಯುತ್ತದೆ.
ಸಿದ್ದರಾಮಯ್ಯ ಭೇಟಿಗೆ ನಿರಾಕರಿಸಿದ ಹಿಂದೂ ಸಂಘಟನೆ ಗಾಯಾಳುಗಳು
ಬಾಗಲಕೋಟೆ ಕೆರೂರು ಘರ್ಷಣೆಯಲ್ಲಿ ಗಾಯಗೊಂಡ ಹಿಂದೂ ಸಂಘಟನೆ ಕಾರ್ಯಕರ್ತರು ಸಿದ್ದರಾಮಯ್ಯ ಅವರನ್ನು ಭೇಟಿಯಾಗೋದಿಲ್ಲ ಅಂದಿದ್ದಾರೆ
ಬಾಗಲಕೋಟೆ : ಬಾದಾಮಿ ತಾಲೂಕಿನ ಕೆರೂರು ಗುಂಪು ಘರ್ಷಣೆಯಲ್ಲಿ ಗಾಯಗೊಂಡವರ ಆರೋಗ್ಯವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಇಂದು ವಿಚಾರಿಸಿದ್ದಾರೆ. ಈ ವೇಳೆ ಗಾಯಗೊಂಡ ಮುಸ್ಲಿಂ ವ್ಯಕ್ತಿಗಳು ಹಾಗೂ ಅವರ ಕುಟುಂಬಸ್ಥರು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ ಘಟನೆ ನಡೆದಿದೆ.
ಸಿದ್ದರಾಮಯ್ಯ ಅವರ ಟೂರ್ ಪ್ಲಾನ್ ಪ್ರಕಾರ ಗಾಯಗೊಂಡ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನೂ ಭೇಟಿಯಾಗಬೇಕಾಗಿತ್ತು. ಆದರೆ ಹಿಂದೂ ಸಂಘಟನೆಯ ಗಾಯಾಳುಗಳು ಸಿದ್ದರಾಮಯ್ಯ ನಮ್ಮ ಭೇಟಿಯಾಗಲು ಬರೋದು ಬೇಡ ಅಂದಿದ್ದಾರೆ. ಹೀಗಾಗಿ ಕೊನೆಯ ಕ್ಷಣದಲ್ಲಿ ಸಿದ್ದರಾಮಯ್ಯ ಅವರ ಆಸ್ಪತ್ರೆ ಭೇಟಿ ರದ್ದಾಗಿದೆ.
ಈ ಘಟನೆಯಲ್ಲಿ ಗಾಯಗೊಂಡಿದ್ದ ಹಿಂದೂ ಜಾಗರಣ ವೇದಿಕೆಯ ಅರುಣ ಕಟ್ಟಿಮನಿ, ಲಕ್ಷ್ಮಣ ಕಟ್ಟಿಮನಿ, ಯಮನೂರ ಸೇರಿದಂತೆ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಘಟನೆಯಲ್ಲಿ ಮುಸ್ಲಿಂ ಸಮುದಾಯದ ಐವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಆಸ್ಪತ್ರೆಗೆ ಸಿದ್ದರಾಮಯ್ಯ ಬರೋದು ಬೇಡ ಎಂದು ಬಾಗಲಕೋಟೆ ಎಸ್ಪಿಯವರಿಗೆ ಗಾಯಾಳುಗಳು ತಿಳಿಸಿದ ಹಿನ್ನಲೆಯಲ್ಲಿ ಭೇಟಿ ರದ್ದುಗೊಳಿಸಲಾಯ್ತು. ಕೇವಲ ಮುಸ್ಲಿಂಮ ಗಾಯಾಲುಗಳ್ನನು ಸಿದ್ದರಾಮಯ್ಯ ಭೇಟಿಯಾಗಬೇಕಾಯ್ತು
Discussion about this post