ರಾಜ್ಯಸಭೆಯ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು (veerendra heggade) ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.
ನವದೆಹಲಿ : ರಾಜ್ಯಸಭೆಯ ನಾಮನಿರ್ದೇಶನ ಸದಸ್ಯರಾಗಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ( veerendra heggade) ಗುರುವಾರ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗಮನ ಸೆಳೆದಿದ್ದಾರೆ. ಗುರುವಾರ 11 ಗಂಟೆಗೆ ರಾಜ್ಯಸಭೆಯಲ್ಲಿ ಸಭಾಪತಿ ವೆಂಕಯ್ಯ ನಾಯ್ಡು ಸಮ್ಮುಖದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಇದಕ್ಕೂ ಮುನ್ನ ಸಂಸತ್ ಭವನಕ್ಕೆ ಆಗಮಿಸಿದ ಹೆಗ್ಗಡೆಯವರನ್ನು (veerendra heggade) ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ವಾಗತಿಸಿದರು. ಈ ವೇಳೆ ಕೇಂದ್ರ ಸಚಿವ ಪಿಯೂಷ್ ಗೋಯಲ್, ಸಚಿವ ಪ್ರಹಾದ್ ಜೋಷಿ ಉಪಸ್ಥಿತರಿದ್ದರು. ದೆಹಲಿ ವಿಮಾನ ನಿಲ್ದಾಣದಲ್ಲಿ ಕರ್ನಾಟಕದ ಬಿಜೆಪಿ ಸಂಸದರು ವೀರೇಂದ್ರ ಹೆಗ್ಗಡೆಯವರನ್ನು ಸ್ವಾಗತಿಸಿದ್ದರು.
ಇದನ್ನೂ ಓದಿ : vikranth rona :13 ವರ್ಷಗಳ ಬಳಿಕ ದೆಹಲಿಗೆ ಭೇಟಿ : ವಿಕ್ರಾಂತ್ ರೋಣ ಬಿಡುಗಡೆಗೂ ಮುನ್ನ ಬಿಜೆಪಿ ಸಚಿವರ ಮನೆಗೆ ದೌಡು
ಪ್ರಮಾಣ ವಚನದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ವೀರೇಂದ್ರ ಹೆಗ್ಗಡೆಯವರು, ಶ್ರೀಕ್ಷೇತ್ರ ಧರ್ಮಸ್ಥಳದ ಪ್ರಸಾದ ನೀಡಿದರು. ಈ ವೇಳೆ ಪರಸ್ಪರ ಧನ್ಯವಾದ ವಿನಿಮಯ ಕೂಡಾ ನಡೆದಿದೆ.
ಇದಾದ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಮೊದಲು ಅರ್ಜಿ ಹಾಕಿದವರು ಪಡೆಯುತ್ತಿದ್ದರು. ಈಗ ಕೆಲಸ ಮಾಡಿದವರನ್ನು ಗುರುತಿಸಲಾಗುತ್ತಿದೆ. ನಾನು ಯಾವ ಪಕ್ಷಕ್ಕೂ ಹೊಂದಿಕೊಳ್ಳುವುದಿಲ್ಲ. ನಾನು ಫಲಾಫೇಕ್ಷೆಯಿಲ್ಲದೆ ಕೆಲಸ ಮಾಡುತ್ತೇನೆ ಅಂದರು. ಇದೇ ವೇಳೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯಶಸ್ವಿ ಪ್ರಯೋಗಗಳನ್ನು ವಿವಿಧ ರಾಜ್ಯಗಳಿಗೂ ವಿಸ್ತರಿಸುವ ಕನಸನ್ನು ವೀರೇಂದ್ರ ಹೆಗ್ಗೆಡೆ ತೆರೆದಿಟ್ಟರು.
Discussion about this post