ಯಕ್ಷಗಾನ ರಂಗದಲ್ಲಿ ಬಲಿಪ ಪರಂಪರೆಯನ್ನು ಬೆಳೆಸಿದ ಹಿರಿಮೆ ಬಲಿಪ ನಾರಾಯಣ ಭಾಗವತರದ್ದು. (Balipa narayana bhagavatha)ಅನೇಕ ಶಿಷ್ಯರನ್ನು ರಂಗಕ್ಕೆ ಕೊಟ್ಟ ಬಲಿಪರಿಗೆ ಇಂದಿಗೂ ಅಭಿಮಾನಿಗಳಿದ್ದಾರೆ
ಮಂಗಳೂರು : ಯಕ್ಷಗಾನದ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತು (Balipa narayana bhagavatha)ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಯೋ ಸಹಜವಾಗಿ ಕಾಣಿಸಿಕೊಂಡಿರುವ ಸಮಸ್ಯೆ ಹಿನ್ನಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾಗವತರು (Balipa narayana bhagavatha) ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಪಾವಂಜೆ ಮೇಳದ ಮುಖ್ಯಸ್ಥರು ಮತ್ತು ಪಟ್ಲ ಫೌಂಡೇಷನ್ ನ ಪಟ್ಲ ಸತೀಶ್ ಶೆಟ್ಟಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ತಮ್ಮ ಗುರುಗಳ ಆರೋಗ್ಯ ವಿಚಾರಿಸಿದ ಅವರು ಯೋಗಕ್ಷೇಮ ವಿಚಾರಿಸಿದ್ದಾರೆ.
ಬಲಿಪರು ಕಾಸರಗೋಡಿನ ಪಡ್ರೆ ಗ್ರಾಮದಲ್ಲಿ ಮಾರ್ಚ್ ೧೩, ೧೯೩೮ರಂದು ಜನಿಸಿದರು. ಇವರ ತಂದೆ ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ. ಇವರು ೭ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು ೧೩ನೇ ವರ್ಷದಲ್ಲಿ ರಂಗ ಪ್ರವೇಶಗೈದರು. ಇವರ ಪತ್ನಿ ಶ್ರೀಮತಿ ಜಯಲಕ್ಷ್ಮಿ. ಇವರ ನಾಲ್ವರು ಪುತ್ರರ ಪೈಕಿ, ಮಾಧವ ಬಲಿಪರಿಗೆ ಹಿಮ್ಮೇಳವಾದನ ತಿಳಿದಿದ್ದು, ಶಿವಶಂಕರ ಬಲಿಪ ಮತ್ತು ಪ್ರಸಾದ ಬಲಿಪರು ಉತ್ತಮ ಭಾಗವತರು, ಪ್ರಸಾದ ಬಲಿಪರು ಕಟೀಲು ಮೇಳದಲ್ಲಿ ಮುಖ್ಯ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದರು. ( ಪ್ರಸಾದರು ದೀರ್ಘ ಕಾಲ ಅನಾರೋಗ್ಯದಿಂದ ಇತ್ತೀಚೆಗೆ ಮೃತಪಟ್ಟಿದ್ದಾರೆ) ಇನ್ನೋರ್ವ ಪುತ್ರ ಶಶಿಧರ್ ಬಲಿಪ ಕೃಷಿಕರು.
Discussion about this post