2019ರಲ್ಲಿ ಬಾಲ್ಯದ ಗೆಳತಿ ಪ್ರೇರಣಾ ಅವರೊಂದಿಗೆ Dhruva sarjaa ಸಪ್ತಪದಿ ತುಳಿದಿದ್ದರು
ನಟ ಧ್ರುವ ಸರ್ಜಾ ಪ್ರೇರಣಾ ( Dhruva sarjaa) ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ಧ್ರುವ ಅವರೇ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನಾವು ಜೀವನದ ಹೊಸ ಹಂತವನ್ನು ಪ್ರವೇಶಿಸುತ್ತಿದ್ದೇವೆ. ಶೀಘ್ರದಲ್ಲೇ ಬರಲಿರುವ ಪುಟ್ಟನನ್ನು ಆಶೀರ್ವದಿಸಿ, ಜೈ ಹನುಮಾನ್ ಎಂದು ಬರೆದುಕೊಂಡು, ಸುಂದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಇದನ್ನು ಓದಿ : Judge subash kumar behari : ನೇಣು ಬಿಗಿದ ಸ್ಥಿತಿಯಲ್ಲಿ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ಪತ್ತೆ
ಅದ್ದೂರಿ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟ ಧ್ರುವ ಪೊಗರು ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದರು. ಇದೀಗ ಮಾರ್ಟಿನ್ ಸಿನಿಮಾದಲ್ಲಿ ಬ್ಯುಸಿಯಾಗಿರುವ ಧ್ರುವ, ಪ್ರೇಮ್ ಅವರೊಂದಿಗೆ ಪಾನ್ ಇಂಡಿಯಾ ಸಿನಿಮಾಗೆ ಹಸಿರು ನಿಶಾನೆ ತೋರಿದ್ದಾರೆ.
2019ರಲ್ಲಿ ಬಾಲ್ಯದ ಗೆಳತಿ ಪ್ರೇರಣಾ ಅವರೊಂದಿಗೆ ಸಪ್ತಪದಿ ತುಳಿದಿದ್ದರು.
Discussion about this post