ಕೊನೆಗೂ BJP Ticket ಘೋಷಣೆಯಾಗಿದೆ. ಈ ಮೂಲಕ Karnataka Election ಗೆ ಬಿಜೆಪಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇನ್ನು 2 ದಿನ ಮಾತ್ರ ಬಾಕಿ ಇದೆ ಅನ್ನುವ ಹೊತ್ತಿನಲ್ಲಿ ಬಿಜೆಪಿ ( BJP Ticket) ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯನ್ನು ಗಮನಿಸಿದರೆ ಕಾರ್ಯಕರ್ತರ ಆಕ್ರೋಶಕ್ಕೆ ಬಿಜೆಪಿ ಹೈಕಮಾಂಡ್ ಮಣಿದಂತೆ ಕಾಣಿಸುತ್ತಿದೆ. ಜೊತೆಗೆ ಕರಾವಳಿಯಲ್ಲಿ ಗುಜರಾತ್ ಮಾಡೆಲ್ ಅನ್ನು ಬಿಜೆಪಿ ಪ್ರಯೋಗಿಸಿರುವುದು ಸ್ಪಷ್ಟವಾಗಿದೆ.
ರಾಜ್ಯದ 31 ಜಿಲ್ಲೆಗಳ ಒಟ್ಟು 224 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ( BJP Ticket )ಈ ಬಾರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಅದರಂತೆ ಬಿಡುಗಡೆಯಾದ ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಎರಡನೇ ಪಟ್ಟಿಯಲ್ಲಿ 35 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಲಿದೆ.
ಇನ್ನು ಇಂದು ಬಿಡುಗಡೆಯಾಗಿರುವ ಪಟ್ಟಿಯಲ್ಲಿ 52 ಕ್ಷೇತ್ರಗಳಿಗೆ ಹೊಸ ಮುಖಗಳನ್ನು ಪರಿಚಯಿಸಲಾಗಿದೆ. ಈ ಬಾರಿ ಹೊಸಬರಿಗೆ ಬಿಜೆಪಿ ಮಣೆ ಹಾಕಿದ್ದು, ಹಳಬರಿಗೆ ಕೋಕ್ ನೀಡಲಾಗಿದೆ.
ಇನ್ನು ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಬಿಜೆಪಿ ಹೈಕಮಾಂಡ್ ಸಿಹಿ ಕೊಟ್ಟಿದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರರಿಗೆ ಟಿಕೆಟ್ ಕೇಳಿದ್ದರು. ಯಡಿಯೂರಪ್ಪ ಮಾತಿಗೆ ಬಿಜೆಪಿ ಹೈಕಮಾಂಡ್ ಅಸ್ತು ಅಂದಿದೆ. ವಿಜಯನಗರ ಜಿಲ್ಲೆ ಸ್ಥಾಪನೆಗಾಗಿ ಹೋರಾಟ ಮಾಡಿದ ಆನಂದ ಸಿಂಗ್ ಪುತ್ರ ಸಿದ್ದಾರ್ಥ್ ಸಿಂಗ್ ಗೆ ಟಿಕೆಟ್ ಕೇಳಿದ್ದರು. ತಾವು ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಬದಲಾಗಿ ಪುತ್ರನಿಗೆ ಟಿಕೆಟ್ ಕೊಡಿ ಅಂದಿದ್ದರು. ಅದರಂತೆ ವಿಜಯನಗರ ಕ್ಷೇತ್ರದಲ್ಲಿ ಸಿದ್ದಾರ್ಥ್ ಸಿಂಗ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.
ಈಶ್ವರಪ್ಪ ಕೂಡಾ ಪುತ್ರನಿಗೆ ಟಿಕೆಟ್ ಕೇಳಿದ್ದಾರೆ. ಆದರೆ ಆ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಯನ್ನು ಘೋಷಿಸಲಾಗಿಲ್ಲ.
Discussion about this post