ಗ್ಯಾರಂಟಿ ಮತ್ತು ಬಿಜೆಪಿಯ ಆಡಳಿತ ವಿರೋಧಿ ಅಲೆಯ ಕಾರಣದಿಂದ ಕರ್ನಾಟಕದಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಇದೀಗ ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲು ರಣತಂತ್ರ ರೂಪಿಸುತ್ತಿದೆ.
ಕರ್ನಾಟಕದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಇದೀಗ ಲೋಕಸಭಾ ಚುನಾವಣೆಗೆ ತಾಲೀಮು ಪ್ರಾರಂಭಿಸಿದೆ. ಈಗಾಗಲೇ ನರೇಂದ್ರ ಮೋದಿ ವಿರೋಧಿ ಪಾಳಯವನ್ನು ಒಟ್ಟುಗೂಡಿಸಿರುವ ಕಾಂಗ್ರೆಸ್ ಸಮರಾಭ್ಯಾಸ ನಡೆಸಿದೆ.
ಈ ನಡುವೆ ಕರ್ನಾಟಕದಲ್ಲೂ ಅತೀ ಹೆಚ್ಚು ಲೋಕಸಭಾ ಸ್ಥಾನಗಳನ್ನು ಪಡೆಯೋ ನಿಟ್ಟಿನಲ್ಲಿ ಕಾಂಗ್ರೆಸ್ ರಣನೀತಿ ರೂಪಿಸಲಿದೆ. ಈ ನಿಟ್ಟಿನಲ್ಲಿ ರಾಜ್ಯ ನಾಯಕರು ದೆಹಲಿಗೆ ದೌಡಾಯಿಸಿದ್ದು, ದೆಹಲಿ ನಾಯಕರೊಂದಿಗೆ ಇಡೀ ದಿನ ಸಭೆ ನಡೆಸಲಿದ್ದಾರೆ.
ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿರೋ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿದ್ದು ಸಂಪುಟದ ಸಚಿವರು ಪಾಲ್ಗೊಳ್ಳಲಿದ್ದಾರೆ.
ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ
ಪ್ರತಿ ಲೋಕಸಭಾ ಕ್ಷೇತ್ರದಲ್ಲಿನ ಸಂಭವನೀಯ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಗೆಲ್ಲುವ ಕುದುರೆ ಬಗ್ಗೆ ಅವಲೋಕನ ನಡೆಯಲಿದೆ. ಜೊತೆಗೆ ಪ್ರತೀ ಕ್ಷೇತ್ರದ ಆಕಾಂಕ್ಷಿಗಳ ಬಗ್ಗೆಯೂ ಚರ್ಚೆ ನಡೆಯಲಿದ್ದು, ಆಕಾಂಕ್ಷಿಗಳ ಪೈಕಿ ಗೆಲ್ಲುವವರು ಯಾರು ಅನ್ನುವುದರ ಕುರಿತಂತೆ ಸರ್ವೇ ನಡೆಸೋ ಬಗ್ಗೆಯೂ ಚರ್ಚೆ ನಡೆಯಲಿದೆ.
ಈ ನಡುವೆ ಇದೇ ಸಭೆಯಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಎದ್ದಿರುವ ಅಸಮಾಧಾನದ ಬಗ್ಗೆಯೂ ಚರ್ಚೆ ನಡೆಯೋ ಸಾಧ್ಯತೆಗಳಿದೆಯಂತೆ. ಸಿದ್ದು ಸಂಪುಟದ ಸಚಿವರು ಶಾಸಕರಿಗೆ ಸ್ಪಂದಿಸುತ್ತಿಲ್ಲ ಅನ್ನುವ ದೂರು ಎಐಸಿಸಿ ಅಧ್ಯಕ್ಷರಿಗೆ ತಲುಪಿದ್ದು, ಈ ಭಿಕ್ಕಟ್ಟು ಇತ್ಯರ್ಥ ಕುರಿತಂತೆಯೂ ಸಮಾಲೋಚನೆ ನಿರೀಕ್ಷಿಸಲಾಗಿದೆ.
ಈ ನಿಟ್ಟಿನಲ್ಲಿ ಸಭೆಗೆ ಆಹ್ವಾನ ಪಡೆದಿರುವ 37 ಮಂದಿ ಮಾತ್ರವಲ್ಲದೆ ಅನೇಕ ಕಾಂಗ್ರೆಸ್ ಶಾಸಕರು ದೆಹಲಿ ವಿಮಾನ ಹತ್ತಿರೋದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಸಭೆಯ ಬಳಿಕ ಅಂದ್ರೆ ಆಗಸ್ಟ್ 3 ರಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆಗೆ ಭೇಟಿಯಾಗಲಿದ್ದು, ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
Discussion about this post