ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗಗಳ ವಿರೋಧಿಯಾಗಿದೆ : ಕೇಂದ್ರ ಗೃಹ ಸಚಿವ ಅಮಿತ್ ಷಾ
ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು ಹರಿಯಾಣದ ಮಹೇಂದ್ರಗಢದಲ್ಲಿ ‘ಹಿಂದುಳಿದ ವರ್ಗಗಳ ಸಮ್ಮಾನ್ ಸಮ್ಮೇಳನ’ವನ್ನು ಉದ್ಘಾಟಿಸಿದರು. ಬಳಿಕ ಅವರು, ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗಗಳ ವಿರೋಧಿಯಾಗಿದೆ. ಇದಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ನೀಡಿದರೆ ಇದೇ ಗತಿ ಇಲ್ಲಿಯೂ ಆಗುತ್ತದೆ. ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಯನ್ನು ನಾವು ಅನುಮತಿಸುವುದಿಲ್ಲ ಎಂದು ಹೇಳಿದರು. ಹಿಂದುಳಿದ ವರ್ಗಗಳ ಮೀಸಲಾಗಿದೆ ಸಂಬಂಧಿಸಿದಂತೆ 1950 ರ ದಶಕದಲ್ಲಿ ರಚಿಸಲಾದ ಕಾಕಾ ಕಾಲೇಕರ್ ಆಯೋಗದ ವರದಿಯನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಎಂದಿಗೂ ಜಾರಿಗೊಳಿಸಲಿಲ್ಲ.
ಈ ಮೂಲಕ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು, ಹಿಂದುಳಿದ ವರ್ಗಗಳಿಗೆ ಅನ್ಯಾಯ ಎಸಗಿದ್ದಾರೆ ಎಂದು ಅಮಿತ್ ಷಾ ಹೇಳಿದರು. ಇದೇ ವೇಳೆ ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಜಾರಿಗೊಳಿಸಿರುವ ವಿವಿಧ ಯೋಜನೆಗಳು ಹಾಗೂ ಮುಂಬರುವ ದಿನಗಳಲ್ಲಿ ಜಾರಿಗೊಳಿಸಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಮಾಹಿತಿಯನ್ನು ಸಚಿವ ಅಮಿತ್ ಷಾ ನೀಡಿದರು.
Discussion about this post