Manu Bhaker ಮನು ಭಾಕರ್ 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದಿದ್ದಾರೆ
2024ರ Paris Olympics 2024 ಕ್ರೀಡಾಕೂಟದಲ್ಲಿ ಭಾರತದ ಪದಕ ಭೇಟೆ ಶುರುವಾಗಿದೆ. 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಮನು ಭಾಕರ್ (Manu Bhaker) ನಿರೀಕ್ಷೆಯಂತೆ ಕಂಚಿನ ಪದಕ ಕೊರಳಿಗೇರಿಸಿದ್ದಾರೆ.
ಶನಿವಾರ ಫೈನಲ್ ಪ್ರವೇಶಿಸಿದ್ದ 22 ವರ್ಷದ ಮನು ಭಾಕರ್ ಮೂರನೇ ದಿನವಾದ ಭಾನುವಾರ (ಜು.28) ಅಂತಿಮ ಸುತ್ತಿನಲ್ಲಿ 3ನೇ ಸ್ಥಾನ ಪಡೆದುಕೊಂಡರು. ಈ ಮೂಲಕ ಶೂಟಿಂಗ್ನಲ್ಲಿ ಭಾರತದ ಪರ ಪದಕ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾದರು.
ಇನ್ನು ದಕ್ಷಿಣ ಕೊರಿಯಾದ ವೈಜೆ ಓ 243.2 ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟರೆ ದಕ್ಷಿಣ ಕೊರಿಯಾದ ವೈಜೆ ಕಿಮ್ 241.3 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ.
A historic medal!
— Narendra Modi (@narendramodi) July 28, 2024
Well done, @realmanubhaker, for winning India’s FIRST medal at #ParisOlympics2024! Congrats for the Bronze. This success is even more special as she becomes the 1st woman to win a medal in shooting for India.
An incredible achievement!#Cheer4Bharat
2004ರಲ್ಲಿ ಅಥೆನ್ಸ್ನಲ್ಲಿ ನಡೆದ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಸುಮಾ ಶಿರೂರ್ ಕೊನೆಯ ಬಾರಿಗೆ ಫೈನಲ್ ತಲುಪಿದ್ದರು. ಆದಾದ ಬಳಿಕ ಭಾರತದ ಪದಕದ ಕನಸು ನನಸಾಗಿರಲಿಲ್ಲ.
ಈ ಪದಕದೊಂದಿಗೆ ಶೂಟಿಂಗ್ ವಿಭಾಗದಲ್ಲಿ 12 ವರ್ಷಗಳ ಒಲಿಂಪಿಕ್ಸ್ ಪದಕದ ಬರವನ್ನು ನೀಗಿಸಿದರು. ಸದ್ಯ ಒಂದು ಕಂಚಿನ ಪದಕದೊಂದಿಗೆ ಪದಕ ಪಟ್ಟಿಯಲ್ಲಿ ಭಾರತ 17ನೇ ಸ್ಥಾನದಲ್ಲಿದೆ.
Kudos to @realmanubhaker on winning the first medal in the #ParisOlympics2024, by bringing home the bronze. You have sent a wave of euphoria across the nation with your stellar performance.
— Amit Shah (@AmitShah) July 28, 2024
The nation swells in pride at your achievement. #Cheer4Bharat
Paris Olympics 2024 Day 2 Live Updates: Shooter Manu Bhaker clinched India’s first medal of the Paris Olympics 2024, striking bronze in Women’s 10m Air Pistol final at the Chatearoux Shooting Center.
Discussion about this post