ಎಸ್ಪಿ, ಐಜಿಪಿಗಳ ನಿರ್ಲಕ್ಷ್ಯಕ್ಕೆ ಬಿಸಿ ಮುಟ್ಟಿಸಿದ ಗೃಹ ಸಚಿವ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಡಾ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು ನಾಗಮಂಗಲ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖಾ ವರದಿ ಬಂದ ಮೇಲೆ ಯಾರದ್ದು ತಪ್ಪು, ಯಾರು ಪ್ರಚೋದನೆ ನೀಡಿದವರು ಎನ್ನುವುದು ತಿಳಿಯಲಿದೆ ಎಂದರು.
ರಾಜ್ಯದಲ್ಲಿ ಯಾವುದೇ ಗಲಭೆಗಳಾದರೂ ಘಟನೆಗಳಾದರೂ ಎಸ್ಪಿ, ಐಜಿಪಿಗಳೇ ಹೊಣೆಗಾರರು ಎಂದು ತಿಳಿಸಿದ್ದಾರೆ. ರಾಜ್ಯದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲು ಯಾರಾದ್ರೂ ಪ್ರಯತ್ನಿಸಿದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತಂತೆ ಪ್ರತಿಕ್ರಿಯಿಸಿ ಮುನಿರತ್ನ ಅವರ ಧ್ವನಿಯನ್ನು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಪರೀಕ್ಷೆ ನಡೆಸಲಿದ್ದಾರೆ ಎಂದರು.
ನಾಳಿನ ಈದ್ ಮಿಲಾದ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.