ಮಣ್ಣಿನ ಫಲವತ್ತತೆ ನಶಿಸುತ್ತಿದ್ದು, ಮಾನವ ಆರೋಗ್ಯವು ಕ್ಷೀಣಿಸುತ್ತಿದೆ
ತೆಂಗು ಬೆಳೆಯಲ್ಲಿ ನೈಸರ್ಗಿಕ ಕೃಷಿಗೆ ಆದ್ಯತೆ ನೀಡುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವ ರಾಮನಾಥ್ ಠಾಕೂರ್ ಕರೆ ನೀಡಿದ್ದಾರೆ.
ರಾಮನಗರದಲ್ಲಿ ವಿಶ್ವ ತೆಂಗು ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತೆಂಗು ಬೆಳೆಯಲ್ಲಿ ಭಾರತ ಮೊದಲ ಸ್ಥಾನಕ್ಕೆರಲು ಬೆಳೆಗಾರರು ಮತ್ತಷ್ಟು ಶ್ರಮಿಸಬೇಕು.
ಸಾಧ್ಯವಾದಷ್ಟು ನೈಸರ್ಗಿಕ ಕೃಷಿಗೆ ಆದ್ಯತೆ ನೀಡುವಂತೆ ಸಲಹೆ ನೀಡಿದ್ದಾರೆ. ತೆಂಗು ಉತ್ಪಾದನೆಯಲ್ಲಿ ಭಾರತ ೩ನೇ ಸ್ಥಾನದಲ್ಲಿದ್ದು, ದೇಶದಲ್ಲಿ ಮತ್ತಷ್ಟು ತೆಂಗು ಉತ್ಪಾದನೆಯಾಗಬೇಕಿದೆ.
ಕಳೆದ ೩೦ ವರ್ಷಗಳಲ್ಲಿ ದೇಶದ ಮಣ್ಣಿನ ಫಲವತ್ತತೆ ನಶಿಸುತ್ತಿದ್ದು, ಮಾನವ ಆರೋಗ್ಯವು ಕ್ಷೀಣಿಸುತ್ತಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿದ ತೆಂಗಿನ ಗುಣಮಟ್ಟ ವರ್ಧನೆಗೆ ಆದ್ಯತೆ ನೀಡುವಂತೆ ತಿಳಿಸಿದ್ದಾರೆ.