ಮೈಸೂರು ಮಾನಸ ಗಂಗೋತ್ರಿಯಲ್ಲಿ ಸಿದ್ದರಾಮಯ್ಯ ಎಚ್ಚರಿಕೆ
ಸುಳ್ಳು ಸುದ್ದಿಗಳು ನನ್ನನ್ನೂ ಬಿಟ್ಟಿಲ್ಲ ಎಂದ ಸಿಎಂ ಸಿದ್ದರಾಮಯ್ಯ
ಪ್ರಜಾಪ್ರಭುತ್ವದಿಂದ ಸಾಮಾಜಿಕ ನ್ಯಾಯ – ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದನೆಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಮೈಸೂರು ಮಾನಸ ಗಂಗೋತ್ರಿಯಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ, ಮಾತನಾಡಿದ ಅವರು ವಾಕ್ ಸ್ವಾತಂತ್ರ್ಯ ನಮಗೆ ನಮ್ಮ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯವಾಗಿದೆ ಎಂದು ತಿಳಿಸಿದರು.
ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಒತ್ತಿ ಹೇಳಿದ್ದರು ಎಂದು ಮಾಹಿತಿ ನೀಡಿದರು.
ಸುಳ್ಳು ಸುದ್ದಿಯ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಕಾನೂನು ರಚಿಸಲಾಗಿದೆ ಎಂದು ತಿಳಿಸಿದರು.