ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಬಾರದಂದ್ರೆ ಹೇಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟದ ಸಹೋದ್ಯೋಗಿಗಳು ಭ್ರಷ್ಟಾಚಾರದಲ್ಲಿ ನಿರತವಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಬೆಂಗಳೂರಿನಲ್ಲಿಂದು ಆರೋಪಿಸಿದ್ದಾರೆ.
ಇಂತಹ ಸರ್ಕಾರದಿಂದ ಉತ್ತಮ ಆಡಳಿತ ನಿರೀಕ್ಷಿಸುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು ತುಮಕೂರು ವಿಶ್ವವಿದ್ಯಾಲಯದಲ್ಲಿ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸದಂತೆ ಕುಲಸಚಿವರು ಮತ್ತು ಅಲ್ಲಿನ ಇನ್ಸ್ ಪೆಕ್ಟರ್ ಸುತ್ತೋಲೆ ಹೊರಡಿಸಿರುವುದು ಖಂಡನೀಯ ಎಂದು ಹೇಳಿದರು.