ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಅರಿವು
ಹೊರಗುತ್ತಿಗೆ ನೌಕರರಿಗೆ ಸರಿಯಾದ ವೇತನ, ವಿನಾಕಾರಣ ನೌಕರಿಯಿಂದ ತೆಗೆದು ಹಾಕುವುದಾಗಿ ಹೆದರಿಸುವುದು, ಕಿರುಕುಳ ನೀಡುವುದು ಕಂಡು ಬಂದಲ್ಲಿ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಸೂಚಿಸಿದ್ದಾರೆ.
ಬಾಗಲಕೋಟೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಮಂಗಳವಾರ ಸರಕಾರದ ವಿವಿಧ ಇಲಾಖೆಗಳು ಹಾಗೂ ವಿವಿಧ ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲ ಹೊರಗುತ್ತಿಗೆ ಸಂಸ್ಥೆಗಳು ನೀಡುತ್ತಿರುವ ಹೊರಗುತ್ತಿಗೆ ನೌಕರರ ಮಾಹಿತಿ ಪಡೆದು ಸಮಗ್ರವಾದ ವರದಿಯನ್ನು ಒಂದು ತಿಂಗಳಲ್ಲಿ ಸಲ್ಲಿಸುವಂತೆ ಹೇಳಿದರು.