೩ ತಿಂಗಳ ಒಳಗೆ ಜಿಲ್ಲೆಯ ಎಲ್ಲಾ ಕೆರೆಗಳ ಸರ್ವೆ ಪೂರ್ಣಗೊಳಿಸಿ
ಭೂ ಕಬಳಿಕೆ ನಿಷೇಧ ಕಾಯ್ದೆ ೧೯೨(ಎ) ಅನುಸಾರ ಕೆರೆಗಳ ಒತ್ತುವರಿ ತೆರವುಗೊಳಿಸುವುದು ಸಂಬಂಧ ಪಟ್ಟ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒತ್ತುವರಿ ತೆರವುಗೊಳಿಸಲು ವಿಫಲರಾದ ಅಧಿಕಾರಿಗಳ ವಿರುದ್ದ ಪ್ರಕರಣ ದಾಲಿಸುವುದಾಗಿ ಎಚ್ಚರಿಸಿದ್ದಾರೆ.
ಯಾವುದೇ ಕಾರಣಕ್ಕೂ ಸುಪ್ರಿಂ ಕೋರ್ಟ್ ಹಾಗೂ ಹಸಿರು ನ್ಯಾಯಾಧೀಕರಣ ನೀಡಿರುವ ತೀರ್ಪುಗಳನ್ನು ಉಲಂಘಿಸಿ, ಕೆರೆ ಹಾಗೂ ಜಲಮೂಲಗಳ ಬಫರ್ ಜೋನ್ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕಾರ್ಯಗಳಿಗೆ ಅನುಮತಿ ನೀಡಬಾರದು ಎಂದು ಸೂಚಿಸಿದ್ದಾರೆ.
೩ ತಿಂಗಳ ಒಳಗೆ ಜಿಲ್ಲೆಯ ಎಲ್ಲಾ ಕೆರೆಗಳ ಸರ್ವೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.