ರೈಲುಗಳನ್ನು ಸ್ವಚ್ಚಗೊಳಿಸುವ ಕೋಚಿಂಗ್ ಟರ್ಮಿನಲ್ಗೆ ಭೇಟಿ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಭೇಟಿ ನೀಡಿ ಶಿವಮೊಗ್ಗ-ಶಿಕಾರಿಪುರ ಉದ್ದೇಶಿತ ನೂತನ ಮಾರ್ಗದ ಪರಿಶೀಲನೆ ನಡೆಸಿದರು.
ಕೋಟೆಗಂಗೂರಿನಲ್ಲಿ ನಿರ್ಮಿಸಲಾಗುತ್ತಿರುವ ರೈಲುಗಳನ್ನು ಸ್ವಚ್ಚಗೊಳಿಸುವ ಕೋಚಿಂಗ್ ಟರ್ಮಿನಲ್ಗೆ ಭೇಟಿ ನೀಡಿ ಮಾತನಾಡಿದ ಅವರು ಈ ರೈಲ್ವೇ ಕೋಚಿಂಗ್ ಟರ್ಮಿನಲ್ ರಾಜ್ಯದಲ್ಲೇ ಮೊದಲನೆಯದಾಗಿದ್ದು, ೨೦೨೬ ರೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ : ರಾಜ್ಯದಲ್ಲಿ ಸಿಬಿಐ ತನಿಖೆ ನಡೆಸುವಂತಿಲ್ಲ : ರಾಜ್ಯಪಾಲರ ಪತ್ರಗಳಿಗೆ ಮುಖ್ಯಕಾರ್ಯದರ್ಶಿ ಉತ್ತರಿಸದಂತೆ ಸಂಪುಟ ನಿರ್ಣಯ
ಇಲ್ಲಿ ಟರ್ಮಿನಲ್ ನಿರ್ಮಾಣದಿಂದ ರಾಜ್ಯ ಎಲ್ಲ ರೈಲುಗಳು ಸ್ವಚ್ಚತೆಗಾಗಿ ಇಲ್ಲಿಗೆ ಬರಲಿವೆ. ಇಲ್ಲಿ ರೈಲ್ವೆ ಡಿಪೋ ನಿರ್ಮಾಣವಾಗುವುದರಿಂದ ವಂದೇ ಭಾರತ್ ರೈಲು ಸಹ ಬರಲಿದೆ.
ಟರ್ಮಿನಲ್ ನಿರ್ಮಾಣದಿಂದ ಸ್ಥಳೀಯವಾಗಿ ಉದ್ಯೋಗಾವಕಾಶಗಳು ಹೆಚ್ಚಲಿವೆ. ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಮತ್ತು ಗುಣಮಟ್ಟವನ್ನು ಪರಿಶೀಲಿಸಲು ರೈಲ್ವೇ ಮುಖ್ಯ ಅಭಿಯಂತರರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಎಲ್ಲರೂ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲು ಸಹಕರಿಸಬೇಕೆಂದು ಸೂಚಿಸಿದರು.