ಚಿತ್ರದುರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ ವೇಳೆ ಅವರ ಭದ್ರತಾ ಸಿಬ್ಬಂದಿ ಇನ್ನೋವಾ ಕಾರಿನಲ್ಲಿ
ಬಾಕ್ಸ್ ಇರಿಸಿದ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಭದ್ರತಾ ಸಿಬ್ಬಂದಿ ಬಳಿ ಸಾಮಾನ್ಯವಾಗಿ ಭದ್ರತೆಗೆ ಸಂಬಂಧಿಸಿದ ಬಾಕ್ಸ್ ಇರುತ್ತದೆ.
ಚಿತ್ರದುರ್ಗದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಬಾಕ್ಸ್ ಅನ್ನು ಪರಿಶೀಲನೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರದುರ್ಗ ಸಮಾವೇಶದ ಬಳಿಕ ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಹೀಗಾಗಿ ಚಿತ್ರದುರ್ಗದಿಂದ ಬಾಕ್ಸ್ ರವಾನೆ ಮಾಡಲಾಗಿದೆ ಎಂದು ಸ್ಪಷ್ಟನೆ ಪಡಿಸಿದರು.
Discussion about this post