ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು ಎನ್ನುವ ಹೇಳಿಕೆ ವಿಚಾರ ಈಗ ಅಪ್ರಸ್ತುತ ಎಂದಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ತೀರ್ಮಾನ ಕೈಗೊಂಡಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾರೆ. ಐದು ವರ್ಷಗಳ ಕಾಲ ಅವರೇ ಆಡಳಿತ ನಡೆಸಲಿದ್ದಾರೆ ಎಂದಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಹೇಳಿಕೆ ನೀಡಿರುವವರಿಂದ ವಿವರಣೆ ಪಡೆಯುತ್ತೇನೆ. ಈ ಹೇಳಿಕೆ ಯಾಕೆ ಕೊಟ್ಟಿದ್ದೀರಿ ಎಂದು ಸ್ಪಷ್ಟನೆ ಕೇಳುತ್ತೇನೆ ಅಂದಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಭೇಟಿ ಮಾಡಿ ಉಪ ಚುನಾವಣೆಯಲ್ಲಿ ಪ್ರಚಾರ ಮಾಡುವಂತೆ ಆಹ್ವಾನಿಸಿರುವ ದಿನೇಶ್ ಗುಂಡೂರಾವ್ ಅವರಿಗೆ ಒಂದೆರಡು ದಿನ ಬರುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
Discussion about this post