ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಬರೆದವರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಿದ್ದ ಜೆಡಿಎಸ್ ನಾಯಕರಿಗೆ ಹಿನ್ನಡೆಯಾಗಿದೆ.
ಸುಲಭವಾಗಿ ಕ್ರೆಡಿಟ್ ಕಾರ್ಡ್ ಪಡೆಯುವುದು ಹೇಗೆ…?
‘ಟ್ರೋಲ್ ಮಗಾ‘ ಫೇಸ್ಬುಕ್ ಪುಟದ ಅಡ್ಮಿನ್ ಜಯಕಾಂತ್ ಅವರು ತಮ್ಮ ಮೇಲಿನ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಅಮೆಝಾನ್ ನಲ್ಲಿ ಇಂದೇನೂ ಆಫರ್ ಹಾಕಿದ್ದಾರೆ…?
ಈ ವೇಳೆ ಪೊಲೀಸರ ಕಾರ್ಯವೈಖರಿಯನ್ನು ಕಟು ಶಬ್ಧಗಳಲ್ಲಿ ಖಂಡಿಸಿದ ನ್ಯಾಯಾಧೀಶರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೇಯೋ ಹೇಗೆ, ‘ಕರ್ನಾಟಕ ಪೊಲೀಸ್ ರಾಜ್ಯವಾಗಿದೆಯೇ’ ಎಂದು ಖಾರವಾಗಿ ಪ್ರಶ್ನಿಸಿದರು.
ಜೆಡಿಎಸ್ ಮುಖಂಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪದಡಿ ಬಂಧನಕ್ಕೊಳಗಾಗಿರುವ, ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಂ.ಅರುಣ್ ಶ್ಯಾಮ್, ‘ಪೊಲೀಸರು ಈ ಪ್ರಕರಣದಲ್ಲಿ ನಿಯಮಬಾಹಿರವಾಗಿ ನಡೆದುಕೊಂಡಿದ್ದಾರೆ’ ಎಂದರು.
Get upto 80% off on Electronics and Accessories
ಇದಕ್ಕೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಗಳು, ‘ಶ್ರೀಸಾಮಾನ್ಯರು ರಸ್ತೆ ಮೇಲೆ ನಿರ್ಭಯವಾಗಿ ಓಡಾಡಲೂ ಆಗದಂತಹ ಸ್ಥಿತಿ ಇದೆ. ಅರ್ಜಿದಾರರು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರೂ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿ ಪೊಲೀಸ್ ವಶದಲ್ಲಿ ಇರಿಸಿಕೊಳ್ಳಲಾಗುತ್ತದೆ ಎಂದರೆ ಏನರ್ಥ, ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತಿಲ್ಲವೇ’ ಎಂದು ಆಕ್ರೋಶ ಹೊರಹಾಕಿದರು. ಜೊತೆಗೆ ಅರ್ಜಿದಾರರನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸಿದರು.
Discussion about this post