ಭಾರತ-ಮುಸ್ಲಿಮರಿಗಾಗಿ ಇರುವ ದೇಶವಲ್ಲ . ಸರ್ಕಾರ ಮುಸ್ಲಿಮರನ್ನು ಹೊರಗಿಡುವ ಪ್ರಯತ್ನ ಮಾಡುತ್ತಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪುತ್ರಿ ಸನಾ ಇಲ್ತಿಜಾ ಜವೇದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸುವ ಸಂದರ್ಭದಲ್ಲಿ ಆಗಸ್ಟ್ 5ರಂದು ಮೆಹಬೂಬಾ ಮುಫ್ತಿಯವರನ್ನು ಬಂಧನಕ್ಕೊಳಪಡಿಸಿದಾಗಿನಿಂದ ಸನಾ ಇಲ್ತಿಜಾ ಜವೇದ್ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದೀಗ ನೆರೆಯ ರಾಷ್ಟ್ರಗಳ ಮುಸ್ಲಿಮೇತರರಿಗೆ ಮಾತ್ರ ಪೌರತ್ವ ನೀಡುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕಿಡಿ ಕಾರಿರುವ ಅವರು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ವಿವಾದಿತ ತಿದ್ದುಪಡಿ ಮಸೂದೆಗೆ ಅನುಮೋದನೆ ಸಿಗುತ್ತಿದ್ದಂತೆ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿಯವರ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿರುವ ಅವರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
Discussion about this post