ಇತ್ತೀಚೆಗೆ ಕೊಡಗಿನ ವಿರಾಜಪೇಟೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರ ಮನೆ ಹಾಗೂ ತಂದೆಯ ಒಡೆತನದಲ್ಲಿರುವ ಸೆರಿನಿಟಿ ಹಾಲ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇಡೀ ದಿನ ಮನೆ ಹಾಗೂ ಕಚೇರಿಯಲ್ಲಿ ಪರಿಶೀಲನೆ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ಈ ಸಂದರ್ಭದಲ್ಲಿ 25 ಲಕ್ಷ ರೂ. ನಗದು ಕೂಡ ಪತ್ತೆಯಾಗಿತ್ತು ಎಂದು ಹೇಳಲಾಗಿತ್ತು.
ನಂತರ ಮೈಸೂರಿನಲ್ಲಿ ವಿಚಾರಣೆಗೆ ಆಗಮಿಸುವಂತೆ ಆದಾಯ ತೆರಿಗೆ ಇಲಾಖೆಯಿಂದ ಸಮನ್ಸ್ ನೀಡಲಾಗಿತ್ತು. ಮಂಗಳವಾರ ಬೆಳಗ್ಗೆ ರಶ್ಮಿಕಾ ಮಂದಣ್ಣ, ತಂದೆ ಮದನ್ ಮಂದಣ್ಣ, ತಾಯಿ, ವಕೀಲರು ಹಾಗೂ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರೊಂದಿಗೆ ನಗರದ ನಜರಾಬಾದ್ನಲ್ಲಿರುವ ಆದಾಯ ತೆರಿಗೆ ಇಲಾಖೆ ಮುಖ್ಯ ಕಚೇರಿಗೆ ಆಗಮಿಸಿದರು.
ಮೂರು ಗಂಟೆಗಳ ಕಾಲ ನಿರಂತರವಾಗಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಶ್ನಿಸಿ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಗತ್ಯ ಇದ್ದಲ್ಲಿ ಮತ್ತೆ ವಿಚಾರಣೆಗೆ ಆಗಮಿಸಬೇಕು ಎನ್ನುವ ಸೂಚನೆಯೊಂದಿಗೆ ಕಳುಹಿಸಿದರು.
ಮತ್ತೊಂದು ಕಡೆ ಹುಟ್ಟು ಹಬ್ಬದ ಸಂಭ್ರಮದಲ್ಲಿ ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿದ ದುನಿಯಾ ವಿಜಿಗೆ ಗಿರಿನಗರ ಪೊಲೀಸರು ನೊಟೀಸ್ ನೀಡಿದ್ದಾರೆ.
ಈ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾಗಿರುವ ಅವರು ಸತತ ಎರಡು ಗಂಟೆಗಳ ಕಾಲ ದುನಿಯಾ ವಿಜಯ್ ವಿವರಣೆ ನೀಡಿದ್ದಾರಂತೆ.
ಘಟನೆ ಸಂಬಂಧ ಎಲ್ಲಾ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದೇನೆ. ಹುಟ್ಟುಹಬ್ಬದ ವೇಳೆ ಅಭಿಮಾನಿಯೊಬ್ಬ ಕೊಟ್ಟ ತಲ್ವಾರ್ನಿಂದ ಕೇಕ್ ಮಾಡಿದೆ. ಆಗ ಅದು ತಪ್ಪು ಎನ್ನುವುದು ನನಗೆ ಗೊತ್ತಾಗಿಲ್ಲ. ಇನ್ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸುತ್ತೇನೆ ಎಂದು ವಿಚಾರಣೆ ಬಳಿಕ ಮಾಧ್ಯಮಗಳಿಗೆ ಹೇಳಿದ್ದಾರೆ.
Discussion about this post