ಬೆಂಗಳೂರು : ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಗುರುವಾರ ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 7.30ರ ಸುಮಾರಿಗೆ ರುದ್ರಪ್ಪ ನಿಧನರಾಗಿದ್ದಾರೆ. ಈ ಬಗ್ಗೆ ದುನಿಯಾ ವಿಜಯ್ ಅವರೇ ಮಾಹಿತಿ ಕೊಟ್ಟಿದ್ದು , ತಂದೆಯ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟ ದುನಿಯಾ ವಿಜಯ್ ”ಮಿಸ್ ಯು ಅಪ್ಪ” ಎಂದು ಬರೆದುಕೊಂಡಿದ್ದಾರೆ.
ಜುಲೈ ತಿಂಗಳಲ್ಲಿ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ನಿಧನ ಹೊಂದಿದ್ದರು.ಆನೇಕಲ್ ನ ಕುಂಬಾರಹಳ್ಳಿಯಲ್ಲಿ ರುದ್ರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ.
Discussion about this post