ಚಂದನವನದ ಡ್ರಗ್ಸ್ ದಂಧೆಯಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆನಾರೋಗ್ಯದ ಹಿನ್ನಲೆಯಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿರುವ ಸಂಜನಾ ಈ ಮೂಲಕ 85 ದಿನಗಳ ಜೈಲು ವಾಸವನ್ನು ಅಂತ್ಯಗೊಳಿಸಲಿದ್ದಾರೆ.
ಷರತ್ತು ಬದ್ಧ ಜಾಮೀನು ನೀಡಿರುವ ಹೈಕೋರ್ಟ್ ತಿಂಗಳಲ್ಲಿ 2 ಬಾರಿ ತನಿಖಾಧಿಕಾರಿ ಮುಂದೆ ಹಾಜರು, ಇಬ್ಬರು ಶ್ಯೂರಿಟಿ ಮತ್ತು ಮೂರು ಲಕ್ಷ ಮೊತ್ತದ ಬಾಂಡ್ ಗಳನ್ನು ಇಡುವಂತೆ ಸೂಚಿಸಿದೆ.
ಸಪ್ಟಂಬರ್ 16ರಂದು ಜೈಲು ಸೇರಿದ್ದ ಸಂಜನಾ , ಜಾಮೀನು ಸಲುವಾಗಿ ಇನ್ನಿಲ್ಲದ ಪ್ರಯತ್ನ ನಡೆಸಿದ್ದರು. ಇದೀಗ ಆನಾರೋಗ್ಯದ ಹಿನ್ನಲೆಯಲ್ಲಿ ಜಾಮೀನು ಮಂಜೂರಾಗಿದೆ.
ಇನ್ನು ನಟಿ ರಾಗಿಣಿ ಜಾಮೀನು ಅರ್ಜಿ ಸುಪ್ರೀಂಕೋರ್ಟ್ ನಲ್ಲಿದ್ದು, ಜನವರಿಯಲ್ಲಿ ವಿಚಾರಣೆಗೆ ಬರಲಿದೆ.
Discussion about this post