Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Agriculture : ತೋಟಕ್ಕೆ ವಿಷ ಸುರಿಯುತ್ತೀರಾ…ಕ್ಯಾನ್ಸರ್ ನಿಮ್ಮ ಮನೆಯಂಗಳಕ್ಕೆ ತಲುಪಿದೆ ಅಂದುಕೊಳ್ಳಿ

Radhakrishna Anegundi by Radhakrishna Anegundi
August 18, 2022
in ಕೃಷಿ
Agriculture poison used in agriculture
Share on FacebookShare on TwitterWhatsAppTelegram

ಇತ್ತೀಚಿನ ದಿನಗಳಲ್ಲಿ ಅಂಗಡಿಯಿಂದ ತರ್ಕಾರಿ ಸೇರಿದಂತೆ ಆಹಾರ ವಸ್ತುಗಳನ್ನು ತರುವುದೇ ಆತಂಕಕಾರಿ. ಪೂತನಿಯ ಸಂತಾನವೇ ತುಂಬಿರುವಾಗ ಆರೋಗ್ಯದ ಬಗ್ಗೆ ಕಾಳಜಿ ಸಾಧ್ಯವೇ ( Agriculture)

ಅನ್ನದ ಬಟ್ಟಲಲ್ಲಿ ಈಗ ಪೌಷ್ಠಿಕಾಂಶಕ್ಕಿಂತ ವಿಷವೇ ತುಂಬಿದೆ. ಎಂಡೋಸಲ್ಫಾನ್ ನಂತಹ ದುರಂತ ಕಣ್ಣ ಮುಂದೆ ಇದ್ದರೂ ಭೂಮಿಗೆ ವಿಷ ಸುರಿಯುತ್ತಿರುವವರ ಸಂಖ್ಯೆ ಕಡಿಮೆಯಿಲ್ಲ. ಹಾಗಾದ್ರೆ ಮುಂದೇನು ಈ ಬಗ್ಗೆ ಕೃಷಿಕ ಎ.ಪಿ. ಸದಾಶಿವ ಲೇಖನವೊಂದನ್ನು ಬರೆದಿದ್ದಾರೆ. ಅದರ ಯಥಾವತ್ ರೂಪ ಇಲ್ಲಿದೆ.( Agriculture)

ಗುಂಪೊಂದರಲ್ಲಿ ಪ್ರಶ್ನೆ?, ತೋಟದ ತುಂಬಾ ಬಿದಿರು ಗಿಡಗಳು ಹುಟ್ಟಿಕೊಂಡಿದೆ. ಇವುಗಳ ನಿವಾರಣೆಗೆ ಸುಲಭ ದಾರಿ ಯಾವುದಾದರೂ ಇದೆಯಾ? ಬಂದ ಉತ್ತರ ಹಲವಾರು ಇದ್ದರೂ ನನ್ನ ಗಮನ ಸೆಳೆದದ್ದು ರೌಂಡಪ್ಪಿನ ಡಬಲ್ ಡೋಸ್ ಬಳಕೆ. ಆ ಕುರಿತು ಒಂದಷ್ಟು ಚಿಂತನ ಮಂಥನ ನಡೆಸಿದಾಗ ಕಂಡು ಬಂದ  ಆಘಾತಕಾರಿ ವಿಷಯಗಳು ಮುಂದಿನಂತಿವೆ. ಬಳಸುವಿಕೆ ಅಗತ್ಯವೇ? ಅನಿವಾರ್ಯವೇ?ಅವರವರ ಭಾವಕ್ಕೆ ಬಿಟ್ಟದ್ದು.

ಅಮೆರಿಕಕ್ಕೂ ವಿಯೆಟ್ನಾಮಿಗೂ ಘನ ಘೋರ ಯುದ್ಧ. ಗೆರಿಲ್ಲ ಯುದ್ಧದಲ್ಲಿ  ಪರಿಣತಿ ಹೊಂದಿದ ವಿಯೆಟ್ನಮ್ ಸೈನಿಕರನ್ನು ಮಣಿಸಲು ಕಾಡುಗಳ ಮೇಲೆ ಸುರಿಯಲು ತಯಾರಿಸಿದ ರಾಸಾಯನಿಕವೇ ಎಜೇಂಟ್ ಆರೆಂಜ್. ಸೈನಿಕರನ್ನೇನೋ ಮಣಿಸಿದರು. ಮಣಿದವರು ಮಣಿಸಿದವರು ಎಲ್ಲರೂ ಕ್ಯಾನ್ಸರ್ ರೋಗಕ್ಕೆ ತುತ್ತಾದದ್ದು ಇತಿಹಾಸ. ಆ ಕುರಿತು ಮೊನ್ಸೆಂಟೋ ಕಂಪನಿ ಪಶ್ಚಾತಾಪಗೊಂಡು ಕ್ಷಮಾಪಣೆ ಕೇಳಿತ್ತಂತೆ. ಮುಂದಿನ 10 ವರ್ಷಗಳಲ್ಲಿ ಇನ್ನಷ್ಟು ಸಂಶೋಧನೆ ನಡೆಸಿ ಕಳೆನಾಶಕವಾಗಿ ಬಳಸುವಂತಹ ಹೊಸತೊಂದು ರಾಸಾಯನಿಕವನ್ನು ಕಂಡುಹಿಡಿದರು. ಅದುವೇ ಈಗಿನ ರೌಂಡಪ್/ ಗ್ಲೈಪಾಸ್ಪೇಟ್. ಇದು ಯಾರಿಗೂ, ಯಾವುದೇ ಜೀವಕ್ಕೂ ಹಾನಿ ಮಾಡುವುದಿಲ್ಲ ಎಂಬುದು ಸಂಶೋಧಕರ ಹೇಳಿಕೆ.ಕಾರಣ ಯಾವುದೇ ಜೀವಿಯ ಜೀವಕೋಶಗಳ ಶಕ್ತಿಯನ್ನು ಉದ್ದೀಪನ ಗೊಳಿಸುವ ಅಂಗಗಳು ಕಿಣ್ವಗಳು. ಕಿಣ್ವಗಳನ್ನು ನಿಷ್ಕ್ರಿಯಗೊಳಿಸಿದರೆ ಆ ಜೀವಿ ಸಾಯುವುದಂತೆ. ಹಾಗಾಗಿ ಪತ್ರಹರಿತ್ತಿನ ಮೇಲೆ ಬಿದ್ದಲ್ಲಿ ಸಸ್ಯಗಳ ಜೀವಕೋಶಗಳನ್ನು ನಿಷ್ಕ್ರಿಯಗೊಳಿಸಿ ಅವುಗಳನ್ನು ನಾಶಪಡಿಸುವ ವಿಧಾನ.

ಇದು ವಿಷಮಾಪನದ ಮಾನ್ಯತೆ ಪಡೆದ ಮೂರನೇ ಹಂತದ ನೀಲಿ ಬಣ್ಣದಲ್ಲಿದೆ. ಹಾಗಾಗಿ ವಿಷದ ತೀವ್ರತೆ ಕಡಿಮೆ ಎಂಬುದು ಉಲ್ಲೇಖ.    

ಇದನ್ನು ಓದಿ : Areca nut : ನೀವು ಅಡಿಕೆ ಕೃಷಿಕರೇ… ಕೃಷಿ ವಿಜ್ಞಾನಿಯ ಈ ಮಾತನ್ನು ಒಂದ್ಸಲ ಓದಿಕೊಳ್ಳಿ

ಮನುಷ್ಯನೊಬ್ಬನಿಗೆ ಇದು ಮಾರಕವಾಗಬೇಕಾದರೆ ದಿನವೊಂದಕ್ಕೆ 1.75 ಎಂಜಿ /ಕೆಜಿ ಗಿಂತ ಜಾಸ್ತಿ ಶರೀರವನ್ನು ಹೊಕ್ಕಿದ್ದರೆ ಮಾತ್ರ. ಹೀಗೆಂದು ಕಂಪನಿ ಮತ್ತು ಅದರ ಬಳಕೆಯನ್ನು ಪ್ರೋತ್ಸಾಹಿಸುವ ಇಲಾಖೆಗಳ ಹೇಳಿಕೆ. ಗಾತ್ರಕ್ಕನುಗುಣವಾಗಿ ಸಣ್ಣಜೀವಿಗಳಿಗೆ ಇದು ಬಲು ಸೂಕ್ಷ್ಮ ಪ್ರಮಾಣದಲ್ಲಿ ಹೊಕ್ಕರೂ ಮಾರಕವಾಗಬಲ್ಲುದು. ಮೊನ್ಸೆಂಟೊ ಕಂಪನಿಯು ಗೋದಿ, ಜೋಳ ಸೋಯಾ ಮುಂತಾದವುಗಳಲ್ಲಿ ರೌಂಡಪ್ ನಿರೋಧಕ ತಳಿಗಳನ್ನು ಸೃಷ್ಟಿಸಿ ಮಾರಾಟ ಮಾಡಿ ಗಂಟು ಮಾಡಿಕೊಂಡದ್ದು ಹಳೆಯ ಕಥೆ. ಅಮೆರಿಕದಲ್ಲಿ ಇದನ್ನು ವ್ಯಾಪಕವಾಗಿ ಬಳಸಿದ ಪರಿಣಾಮವಾಗಿ ಅನೇಕ ಜಲಚರಗಳು ನಾಶವಾಗಿದೆಯಂತೆ. ಚಿಟ್ಟೆ,ದುಂಬಿ, ಜೇನು, ಇರುವೆ ಇಂತಹ ಸೂಕ್ಷ್ಮ ಕೀಟಗಳು ನಾಶವಾದುದರ ಪರಿಣಾಮವಾಗಿ ಹೊಸ ಹೊಸ ದುಷ್ಟ ಕೀಟಗಳು ವೃದ್ಧಿಯಾಗಿದೆಯಂತೆ. ಗಿಡಗಳು ತಮ್ಮ ಸ್ವಾಭಾವಿಕ ರೋಗ ನಿಯಂತ್ರಣ ಶಕ್ತಿಯನ್ನು ಕಳೆದುಕೊಂಡಿದ್ದಾವಂತೆ.  ಪ್ರಕೃತಿ ತನ್ನನ್ನು ಉಳಿಸಿಕೊಳ್ಳುವುದಕ್ಕಾಗಿ ರೌಂಡಪ್ಪು ನಿರೋಧಕ ಹೊಸ ಕಳೆಗಳನ್ನು ಸೃಷ್ಟಿ ಮಾಡಿಕೊಂಡಿದೆ.( ನಮ್ಮಲ್ಲಿ ಕೆಲವು ತೋಟಗಳಲ್ಲಿ ಬೆಳೆದ ಪಾಚಿ ಇದಕ್ಕೆ ಸಾಕ್ಷಿ ) ಆ ಭೂಮಿಯಲ್ಲಿ ಬೆಳೆದ ಜೋಳದ ಹುಲ್ಲನ್ನು ತಿಂದ ಜಾನುವಾರುಗಳಲ್ಲಿ( ದನ, ಆಡು, ಕುರಿ ಇತ್ಯಾದಿ ), ಕ್ಯಾನ್ಸರ್, ಚರ್ಮ ಕಾಯಿಲೆಗಳು ಮತ್ತು ಅನೇಕ ಮಾರಕ ರೋಗಗಳನ್ನು ಕಂಡು ಕೊಂಡುಕೊಂಡಿದ್ದಾರೆ.

ಆರಂಭದಲ್ಲಿ ಆಹಾರ ವಸ್ತುಗಳಲ್ಲಿ ಕಾಣದಿದ್ದರೂ ನಿರಂತರ ಬಳಕೆಯಿಂದಾಗಿ ಇಂದು ಆಹಾರದಲ್ಲಿ ರೌಂಡ್ ಅಪ್ ಅಂಶಗಳು ಭಾರಿ ಪ್ರಮಾಣದಲ್ಲಿ ಕಾಣುತ್ತಿದೆಯಂತೆ. ಕ್ಯಾನ್ಸರ್ ಪೀಡಿತರು ಅನೇಕ ಮಂದಿ ಕೋರ್ಟಿಗೆ ಹೋದರೂ ಈ ಕಾರಣದಿಂದ ಕ್ಯಾನ್ಸರ್ ಬಂದಿದೆ ಎಂಬುದನ್ನು ರುಜುವಾತು ಪಡಿಸಲು ಸೋತದ್ದರ ಪರಿಣಾಮವಾಗಿ ಸಂಶಯದ ಲಾಭದಲ್ಲಿ ಕಂಪನಿ ಗೆಲ್ಲುತ್ತಾ ಬಂದಿದೆ. ಹೋರಾಟಗಾರರ ನಿರಂತರ ಹೋರಾಟದಲ್ಲಿ ಇತ್ತೀಚೆಗೆ ಕ್ಯಾಲಿಫೋರ್ನಿಯ ನ್ಯಾಯಾಲಯ ಒಂದು ದಂಪತಿಗಳಿಗೆ ಕ್ಯಾನ್ಸರ್ ಬಂದದ್ದು ಗ್ಲೈ ಪಾಸ್ಪೇಟ್ ಕಾರಣದಿಂದ ಎಂದು ರುಜುವಾತು  ಆಗಿ 86 ಮಿಲಿಯನ್ ಡಾಲರ್ ಪರಿಹಾರದ ಆದೇಶವಾಗಿದೆಯಂತೆ. ಇಷ್ಟೆಲ್ಲಾ ಭಯಂಕರ ಸತ್ಯಗಳು ಕಣ್ಣಮುಂದಿರುವಾಗ ಕುರುಡಾಗಿ ಕಳೆ ನಾಶಕದ ಬಳಕೆ ನಮಗೆ ಸಾಧುವೆ?

ಕೃಷಿಕರಾದ ನಾವು ನಮ್ಮ ಹಿತದೃಷ್ಟಿಯಿಂದ ಆಲೋಚಿಸಬಹುದಾದರೆ, ದಿನವೊಂದಕ್ಕೆ  1.75 ಎಂಜಿ/ ಕೆಜಿ ಶರೀರದ ಒಳಗೆ ಹೋದರೂ ಏನೂ ಆಗುವುದಿಲ್ಲ ಎಂದಿದ್ದರೂ ಏನೂ ಆಗಬಾರದು ಎಂದು ಇಲ್ಲವಲ್ಲ. ಧೂಮಪಾನಿಯೋ, ಮದ್ಯಪಾನಿಯೋ ತಮ್ಮ ದುಶ್ಚಟಗಳಿಂದ ಆರೋಗ್ಯಕ್ಕೆ ತೊಂದರೆ ಇಲ್ಲ ಎಂದು ಹೇಳಿದರೆ ಒಪ್ಪತಕ್ಕ ವಿಷಯವೇ?   ನಿರಂತರ ಪ್ರಯೋಗಗಳ ಮುಖಾಂತರವಾಗಿ ಆರೋಗ್ಯ ರಕ್ಷಣೆಗಾಗಿ ಬಂದ ಅದೆಷ್ಟೋ ಮಾತ್ರೆಗಳು, ಆಂಟಿಬಯೋಟಿಕ್ ಗಳು ನಿಧಾನವಾಗಿ ಮನುಷ್ಯರ ದೇಹದಲ್ಲಿ ( ಎಲ್ಲರಿಗೂ ಅಲ್ಲದಿದ್ದರೂ ಒಂದಷ್ಟು ಜನರಿಗೆ) ಅಡ್ಡ ಪರಿಣಾಮವನ್ನು ಉಂಟುಮಾಡಿದ್ದನ್ನು ಕಂಡಿದ್ದೇವೆ ಮತ್ತು ಮಾರುಕಟ್ಟೆಯಿಂದ ಹಿಂತೆಗೆದುಕೊಂಡದ್ದನ್ನು ನೋಡಿದ್ದೇವೆ. ಹಾಗಿರುವಾಗ ಭಕ್ಷಣೆಗಾಗಿಯೇ ಬಂದ ವಿಷವೊಂದು ಆರೋಗ್ಯದಲ್ಲಿ ಪರಿಣಾಮ ಬೀರಲಾರದು ಎಂಬುದು ನಂಬಿಕೆಗೆ ಅರ್ಹವೇ?

ಈಗಿತ್ತಲಾಗಿ ಪ್ರಚಾರಕ್ಕೆ ಬಂದಿರುವ ಪೆಂತಿ ಕೀಟಗಳು ತಮ್ಮ ಸಹಜ ಆಹಾರದ ಕೊರತೆಯಿಂದಾಗಿ ಅಡಿಕೆಯ ಮೇಲೆ ಹಾವಳಿ ಮಾಡಿರುವುದು ಯಾಕಿರಬಾರದು? ಅನಿವಾರ್ಯವಾದರೆ ಮಾತ್ರ ರಾಸಾಯನಿಕ ಬಳಸಿ ಎಂಬ ವಿಜ್ಞಾನಿಗಳ ಮಾತು ಕೇಳುವಷ್ಟು ತಾಳ್ಮೆ ಯಾರಿಗಿದೆ? ಅಡಿಕೆ ಸೋಗೆಯ ಚುಕ್ಕೆ ರೋಗ ವ್ಯಾಪಕವಾಗಿ ಹಬ್ಬುವುದು ತನ್ನ ಸ್ವನಿಯಂತ್ರಣ ವ್ಯವಸ್ಥೆಯನ್ನು ಕಳಕೊಂಡದ್ದರ ಪರಿಣಾಮ ಯಾಕಿರಬಾರದು?

ನಾವಿಂದು ಎದುರಿಸುತ್ತಿರುವುದು ಕೇವಲ ಕಳೆನಾಶಕವಲ್ಲ. ಅದರೊಂದಿಗೆ ಬಗೆ ಬಗೆಯ ಕೀಟನಾಶಕಗಳು, ಕ್ವಿಕ್ ಪಾಸ್ ಮಾತ್ರೆಗಳು, ರಾಡೋಮಿಲ್ಲು, ಕರಾಟೆಗಳ ಭರಾಟೆ ಎಲ್ಲವೂ ನಮ್ಮ ದೇಹವನ್ನು ಅಲ್ಪ ಅಲ್ಪ ಪ್ರಮಾಣದಲ್ಲಿ ಹೊಕ್ಕರೆ ನಮ್ಮ ಶರೀರಕ್ಕೆ ವಿಷಕಂಠನ ಸಾಮರ್ಥ್ಯ ಇರಬಹುದೇ?

ಅರ್ಬುತನ ( ಕ್ಯಾನ್ಸರ್ )ಆರ್ಭಟ ನೆರೆ ಮನೆಯ ಬಾಗಿಲನ್ನು ತಟ್ಟಿದೆ ಮನೆ ಮನೆಯನ್ನು ಪ್ರವೇಶಿಸುವ ಮೊದಲು ಎಚ್ಚರಾಗೋಣ

 ಮಾಯೆಯು ಒಮ್ಮೊಮ್ಮೆ ತೋರುವಳು ಮಿಗಿಲಕ್ಕರೆಯ,

ಮಾಯಿಪಳು ಗಾಯಗಳನೀವಳಿಷ್ಟಗಳ,

 ಮೈಯ ನೀಂ ಮರೆಯೇ ನೂಕುವಳಾಗ ಪಾತಳಕೆ,

 ಪ್ರೇಯಪೂತನಿಯವಳು ಮಂಕುತಿಮ್ಮ.

ರೌಂಡಪ್ ಎಂಬ ಮಾಯೆ ಕಳೆ ನಾಶದೊಂದಿಗೆ  ನಮಗೆ ತಕ್ಷಣಕ್ಕೆ ಅಕ್ಕರೆಯಾಗಬಲ್ಲಳು. ಕಷ್ಟಗಳನ್ನು ನೀಗಿಸಿದಂತೆ ಕಂಡು ಬಂದಾಳು. ಮೈ ಮರೆತಾಗ ಪಾತಾಳಕ್ಕೆ ನೂಕುವ ಪ್ರೀತಿಯಿಂದ ವಿಷ ಹಾಲು ಉಣಿಸಿದ ಪೂತನಿ ಅವಳು  ಎಂದು ಎಚ್ಚರಿಸುವ ಮಂಕುತಿಮ್ಮನ ಸದಾ ನೆನೆವೆ.

 ಎ. ಪಿ. ಸದಾಶಿವ ಮರಿಕೆ

Tags: FEATURED
ShareTweetSendShare

Discussion about this post

Related News

arecanut-import-govt-allows-import-of-17000-ton-yr-green-areca-nut-without-mip-condition-from-bhutan

Arecanut import : ಭೂತಾನ್ ನಿಂದ ಅಡಿಕೆ ಆಮದಿಗೆ ನಿರ್ಧಾರ : ಕರ್ನಾಟಕದ ಅಡಿಕೆ ಬೆಳೆಗಾರರಿಗೆ ಕೈ ಕೊಟ್ಟ ಬಿಜೆಪಿ

areca nut farm maintenance Bhavishya Anthara

Areca nut : ನೀವು ಅಡಿಕೆ ಕೃಷಿಕರೇ… ಕೃಷಿ ವಿಜ್ಞಾನಿಯ ಈ ಮಾತನ್ನು ಒಂದ್ಸಲ ಓದಿಕೊಳ್ಳಿ

ಕೆಜಿಗೆ 26 ರೂಪಾಯಿ : ಟೊಮೆಟೋ ದರ ಕುಸಿತ

FACT CHECK  : ಗದ್ದೆಯಲ್ಲಿ ಸಿಕ್ಕ ಮೀನುಗಳಿಗೆ ಸಾವಿರಾರು ರೂಪಾಯಿ : ಸಾವಿರ ರೂಪಾಯಿ ಸಿಕ್ರೆ ಹೆಚ್ಚು

ಕೆಜಿ ಟೊಮೆಟೋಗೆ 70 ರೂಪಾಯಿ : 3 ತಿಂಗಳ ಹಿಂದೆ ಕೆಜಿಗೆ 10 ರೂಪಾಯಿ

ಎರಡು ದಿನದ ತರಬೇತಿ : ತಿಂಗಳಿಗೆ 45 ಸಾವಿರ ದುಡಿಯುವ ಅವಕಾಶ : ಕೃಷಿ ಬಗ್ಗೆ ಆಸಕ್ತಿಯುಳ್ಳವರಿಗೆ ಅವಕಾಶ

ಅಯ್ಯೋ ಭಗವಂತ : ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

ಅಡಿಕೆ ನಿಷೇಧಕ್ಕೆ ಬಿಜೆಪಿ ಸಂಸದನಿಂದ ಆಗ್ರಹ : ಮೋದಿಗೆ ಪತ್ರ ಬರೆದ ದುಬೆ

ಮರದ ಗಾಣದ ಎಣ್ಣೆಯ ಉದ್ದಿಮೆಗೆ ಕೈ ಹಾಕಿದ ಸಾಗರದ ಸಾಹಸಿಗರು

ಬಾಳೆಹಣ್ಣು ತಿನ್ನುವಾಗ ಎಚ್ಚರವಿರಲಿ… ತೋಟದಲ್ಲೇ ಸೇರಿಸಲಾಗುತ್ತಿದೆ ವಿಷ

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್