ಐಎಂಎ ವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಇದೇ ಮೊದಲ ಬಾರಿಗೆ ಐಪಿಎಸ್ ಅಧಿಕಾರಿ ಸೇರಿ ಮೂವರು ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
Get upto 40% off on Mens Fashion
ಈ ಹಿಂದೆ ಪೂರ್ವ ವಿಭಾಗದ ಡಿಸಿಪಿಯಾಗಿದ್ದ ಅಜಯ್ ಹಿಲೋರಿ, ಪುಲಕೇಶಿನಗರ ಉಪ ವಿಭಾಗದ ಎಸಿಪಿ ಯಾಗಿದ್ದ ಎಸ್. ರಮೇಶ್ ಕುಮಾರ್ ಹಾಗೂ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಎಂ.ರಮೇಶ್‌ಗೆ ನೋಟಿಸ್ ಜಾರಿ ಮಾಡಲಾಗಿದೆ. ಕ್ರಮವಾಗಿ ಆಗಸ್ಟ್ 2, 4 ಹಾಗೂ 6ರಂದು ಇವರು ವಿಚಾರಣೆಗೆ ಹಾಜರಾಗಬೇಕಾಗಿದೆ.
Get upto 40% off on Womens Fashion
ನಿಗದಿತ ಸಮಯಕ್ಕೆ ಹಣ ವಾಪಸ್ ಕೊಡದೆ ವಂಚಿಸಿದ ಸಂಬಂಧ ಕೆಲ ದೂರುಗಳು ಬಂದಿದ್ದರೂ ಮೂವರು ಅಧಿಕಾರಿಗಳು ಕಾನೂನು ಕ್ರಮ ಕೈಗೊಂಡಿಲ್ಲ. ಮನ್ಸೂರ್ ಖಾನ್ ವಂಚನೆ ವಿಚಾರ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಕರ್ತವ್ಯಲೋಪ ಎಸಗಿದ್ದಾರೆ. ಇದರೊಂದಿಗೆ ತನ್ನ ವಿರುದ್ಧ ಬಂದಿದ್ದ ದೂರುಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರಲು ಮೂವರು ಅಧಿಕಾರಿಗಳಿಗೆ ಮನ್ಸೂರ್ ಖಾನ್ ಹಣ ಕೊಟ್ಟಿದ್ದಾನೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಈ ಕುರಿತು ಮಾಹಿತಿ ಸಂಗ್ರಹಿಸಲು ನೋಟಿಸ್ ನೀಡಲಾಗಿದೆ.
Discussion about this post