ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ
ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಬಾಗಿತ್ವದಲ್ಲಿ ನಡೆದ ತಂಬಾಕು ಮುಕ್ತ ಯುವ ಅಭಿಯಾನ 2.0 ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆನೀಡಿ ಅವರು ಮಾತನಾಡಿದರು.
ಯುವಜನತೆ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಹೇಳಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೀಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯವಾಗಿದೆ.
ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.