ತಿರುಪತಿ : ತಾಳಿ ಕಟ್ಟಿದ ಗಂಡನನ್ನೇ ಕೊಂದ ಪತ್ನಿಯೊಬ್ಬಳು, ಗಂಡನ ರುಂಡದೊಂದಿಗೆ ಠಾಣೆಗೆ ಬಂದು ಶರಣಾದ ಘಟನೆ ಹೈದರಬಾದ್ ನ ರೇಣಿಗುಂಟದಲ್ಲಿ ನಡೆದಿದೆ.
ರೇಣಿಗುಂಟ ನಿವಾಸಿ ವಸುಂಧರಾ ಮತ್ತು ರವಿಚಂದ್ರನ್ ಸಂಸಾರದಲ್ಲಿ ಇತ್ತೀಚೆಗೆ ಬಿರುಕು ಕಾಣಿಸಿಕೊಂಡಿತ್ತು. ಹೀಗಾಗಿ ಪ್ರತೀ ನಿತ್ಯ ಜಗಳ ನಡೆಯುತ್ತಿತ್ತು. ಹೀಗೆ ಬುಧವಾರವೂ ಪತಿ ಪತ್ನಿಯ ನಡುವೆ ಜಗಳ ನಡೆದಿತ್ತು. ಈ ವೇಳೆ ವಸುಂಧರಾ ಪತಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ.
ಬಳಿಕ ಗಂಡನ ತಲೆಯನ್ನು ಬ್ಯಾಗ್ ನಲ್ಲಿ ಹಾಕಿಕೊಂಡು ಠಾಣೆಗೆ ಬಂದು ಶರಣಾಗಿದ್ದಾಳೆ. ಘಟನೆಯಿಂದ ಬೆಚ್ಚಿ ಬಿದ್ದ ಪೊಲೀಸರು ತಕ್ಷಣ ಘಟನಾ ಸ್ಥಳಕ್ಕೆ ದೌಡಾಯಿಸಿ ಸಾಕ್ಷಿ ಕಲೆ ಹಾಕಿದ್ದಾರೆ. ಇದೀಗ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಪ್ರಾಥಮಿಕ ತನಿಖೆ ಪ್ರಕಾರ ಗಂಡನ ಕಾಟ ತಡೆಲಾರದೆ ಪತ್ನಿ ಈ ಕೃತ್ಯ ಎಸಗಿದ್ದಾರೆ ಎಂದು ಗೊತ್ತಾಗಿದೆ. ಅಂದ ಹಾಗೇ ಈ ದಂಪತಿಗೆ 20 ವರ್ಷದ ಮಗನಿದ್ದಾನೆ.
Discussion about this post