ಜನರ ಧಾರ್ಮಿಕ ಭಾವನೆಗಳಿಗೆ ಯಾರು ಧಕ್ಕೆ ತರಬಾರದು
ಧಾರ್ಮಿಕವಾಗಿ ಪಾವಿತ್ರ್ಯತೆ ಹೊಂದಿರುವ ತಿರುಪತಿ ಲಡ್ಡುವಿಗೆ ಪ್ರಾಣಿ ಜನ್ಯ ಕೊಬ್ಬನ್ನು ಸೇರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಇದು ನಿಜವೇ ಆಗಿದ್ದಲ್ಲಿ ತುಂಬಾ ಆಘಾತಕಾರಿ ವಿಷಯವಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ ತನಿಖೆ ನಡೆದು, ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ. ತಿರುಪತಿಗೆ ಕೆಎಂಎಫ್ ತುಪ್ಪ ಪೂರೈಸುತ್ತಿದ್ದಾಗ ಕಲಬೆರಕೆ ಇತ್ಯಾದಿ ಏನೂ ಇರಲಿಲ್ಲ.
ಈ ಬಗ್ಗೆ ಕೆಎಂಎಫ್ ಅಧ್ಯಕ್ಷರ ಜತೆ ಚರ್ಚಿಸಿದ್ದು, ಜನರ ಧಾರ್ಮಿಕ ಭಾವನೆಗಳಿಗೆ ಯಾರು ಧಕ್ಕೆ ತರಬಾರದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.