ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ಕೇರಳ ಕಾಂಗ್ರೆಸ್ ನಾಯಕ ಎಪಿ ಅಬ್ದುಲ್ಲಾ ಕುಟ್ಟಿಯನ್ನು ಕಾಂಗ್ರೆಸ್ ನಿಂದ ಉಚ್ಚಾಟನೆ ಮಾಡಲಾಗಿದೆ.
2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಅಭೂತಪೂರ್ವ ಗೆಲುವಿಗೆ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ನಾಯಕ ಅಬ್ದುಲ್ಲಾ ಕುಟ್ಟಿ ಹೊಗಳಿದ್ದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊರೆತ ಗೆಲುವು ಮೋದಿ ಅವರು ಮಹಾತ್ಮಾ ಗಾಂಧಿ ಅವರ ತತ್ವಗಳನ್ನು ಅಳವಡಿಸಿಕೊಂಡಿದ್ದು ಹಾಗೂ ಅಭಿವೃದ್ಧಿಯ ಅಜೆಂಡಾಗೆ ಜನತೆ ಸೂಚಿಸಿದ ಸಮ್ಮತಿ ಎಂದು ಅಬ್ದುಲಾ ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದಿದ್ದರು.
ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಮುಲ್ಲಪಲ್ಲಿ ರಾಮಚಂದ್ರನ್ ಅಬ್ದುಲ್ಲಾ ಅವರಿಂದ ಸ್ಪಷ್ಟನೆ ಕೇಳಿದ್ದರು. ಅಧ್ಯಕ್ಷರಿಗೆ ಬರೆದಿದ್ದ ಪತ್ರದಲ್ಲಿ ಅಪಹಾಸ್ಯ ಮಾಡಿ ಪ್ರತಿಕ್ರಿಯೆ ನೀಡಿದ್ದ ಅಬ್ದುಲ್ಲಾ ಕುಟ್ಟಿ ಅವರನ್ನು ಶಿಸ್ತು ಉಲ್ಲಂಘನೆ ಕಾರಣದಿಂದ ಉಚ್ಚಾಟನೆ ಮಾಡಲಾಗಿದೆ.
ಕಾಂಗ್ರೆಸ್ ಕೈಕೊಂಡಿರುವ ಈ ಕ್ರಮವನ್ನು ಬಿಜೆಪಿ ಟೀಕಿಸಿದೆ.
Discussion about this post