ಬೆಂಗಳೂರು : ನಿನ್ನೆ ರಾತ್ರಿ ಗೆಳೆಯನೊಂದಿಗೆ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಇದೀಗ ಅವರು ಚಿಕಿತ್ಸೆ ಪಡೆಯುತ್ತಿರುವ ಅಪೋಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ವಿಜಯ್ ಅವರ ಸ್ಥಿತಿ ಕ್ರಿಟಿಕಲ್ ಆಗಿದೆ ಅಂದಿದೆ. ವಿಜಯ್ ಅವರು ಕೋಮಾ ಸ್ಥಿತಿಯಲ್ಲಿ ಇದ್ದು ಕ್ರಿಟಿಕಲ್ ಸ್ಟೇಜ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಆಸ್ಪತ್ರೆಯ ಹಿರಿಯ ವೈದ್ಯ ಅರುಣ್ ಎಲ್ ನಾಯ್ಕ್, ನಿನ್ನೆ ರಾತ್ರಿಯೇ ಅವರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ನಡೆದಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
24 ರಿಂದ 48 ದಿನಗಳ ಕಾಲ ನಿಗಾ ವಹಿಸಲಾಗುವುದು. ಈಗ್ಲೇ ಏನೂ ಹೇಳಲು ಸಾಧ್ಯವಿಲ್ಲ ಅಂದಿದ್ದಾರೆ. ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿದ್ದು, ಮೆದುಳಿನ ಸಿಟಿ ಸ್ಕ್ಯಾನ್ ಕೂಡಾ ಮಾಡಲಾಗಿದೆ. ಹೀಗಾಗಿ ಹೋಪ್ ಫಾರ್ ಬೆಸ್ಟ್ ಅಂದಿದ್ದಾರೆ.
ಈ ನಡುವೆ ನಟ ಶಿವರಾಜ್ ಕುಮಾರ್ ಸಂಚಾರಿ ವಿಜಯ್ ಆರೋಗ್ಯ ಬೇಗ ಸುಧಾರಿಸಲಿ ಎಂದು ಪ್ರಾರ್ಥಿಸಿದ್ದಾರೆ.
Discussion about this post