ಕಾಮಿಡಿಯನ್ ಅರ್ಪಿತ್ ಇಂದ್ರ ವರ್ಧನ್ ಅವರ ಕಾರು ಡಿಕ್ಕಿ – ಇಬ್ಬರ ಸಾವು ( Arpith Indravadan )
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿದ್ದ. ಈ ಸಂಬಂಧ ಹಿಟ್ ಅ್ಯಂಡ್ ರನ್ ಪ್ರಕರಣ ದಾಖಲಿಸಿಕೊಂಡಿದ್ದ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ. ( Arpith Indravadan)
ಬಂಧಿತನನ್ನು ಕಾಮಿಡಿಯನ್ ಅರ್ಪಿತ್ ಇಂದ್ರ ವರ್ಧನ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬಬುಲು (23), ಆಚಲ್ ಸಿಂಗ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಶವದ ಭಾಗಗಳು ಹೆದ್ದಾರಿ ತುಂಬಾ ಚೆಲ್ಲಾಡಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.( Arpith Indravadan)
ಮಧ್ಯಪ್ರದೇಶದ ಇಂದೋರ್ ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಯಟರ್ ಪಂಕ್ಚರ್ ಆಗಿ ನಿಂತಿತ್ತು. ಲಾರಿಯಲ್ಲಿದ್ದವರು ಕೆಳಗಿಳಿದು ಟಯರ್ ಬದಲಿಸುತ್ತಿದ್ದ ವೇಳೆ ಮಧ್ಯರಾತ್ರಿ ಅತೀ ವೇಗ ಮತ್ತು ನಿರ್ಲಕ್ಷ್ಯದಿಂದ ಕಾರು ಚಲಾಯಿಸಿಕೊಂಡು ಬಂದ ಆರೋಪಿ ಅಪಘಾತವೆಸಗಿದ್ದ.
Discussion about this post