ಸಿಎಂ ವಿರುದ್ಧ ಎಫ್ಐಆರ್ ದಾಖಲಾದರೆ ಅದರಿಂದ ಪಕ್ಷಕ್ಕೆ ಯಾವುದೇ ಮುಜುಗರವಿಲ್ಲ
ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಅಧಿಕಾರವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದ ಕ್ರಮವನ್ನು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವೇಷದ ರಾಜಕಾರಣಕ್ಕೆ ಅವಕಾಶವಾಗಬಾರದು ಎಂಬ ಕಾರಣಕ್ಕಾಗಿ ಅನುಮತಿಯನ್ನು ಹಿಂಪಡೆಯಲಾಗಿದೆ ಎಂದರು.
ಮುಖ್ಯಮಂತ್ರಿ ವಿರುದ್ಧ ಎಫ್ಐಆರ್ ದಾಖಲಾದರೆ ಅದರಿಂದ ಪಕ್ಷಕ್ಕೆ ಯಾವುದೇ ಮುಜುಗರ ಉಂಟಾಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ತರಿಸಿದರು.
ಈ ನಡುವೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ಕೋಳಿವಾಡ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಈ ಮಾತು ಹೇಳುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
“ಕೆಪಿಸಿಸಿ ಅಧ್ಯಕ್ಷ ನಾನು, ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷರು ರೆಹಮಾನ್ ಖಾನ್. ಇಲ್ಲಿ ನಾನೇ ಹೇಳುತ್ತಿದ್ದೇನೆಲ್ಲ. ಅವರ ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ ಅಂತ ಎಂದು ಹೇಳಿದರು.