ಮೇಷ
ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು.
7
ವೃಷಭ
ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವದು. ಮಾನಸಿಕ ಉತ್ಸಾಹ ಕಂಡುಬರುವದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವದು. ಕಾರಣಾಂತರ ಅಧಿಕ ಖರ್ಚುಬರಬಹುದು.
4
ಮಿಥುನ
ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು
9
ಕರ್ಕ
ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ.
5
ಸಿಂಹ
ಕುಟುಂಬದಲ್ಲಿ ಮನಸ್ತಾಪ ಕಂಡುಬರುವದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ.
1
ಕನ್ಯಾ
ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು.
8
ತುಲಾ
ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
4
ವೃಶ್ಚಿಕ
ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆÉ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ.
6
ಧನು
ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು
3
ಮಕರ
ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ.
7
ಕುಂಭ
ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ
1
ಮೀನ
ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.
9
ಶುಭಂಭವತು
ಡಾ.ಬಸವರಾಜ್ ಗುರೂಜಿ
ವೈದಿಕ ಜ್ಯೋತಿಷಿ
9972848937
8197319164
Discussion about this post