ಆಟೋಮೊಬೈಲ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ದಿನಗಳು ಸಮೀಪಿಸುತ್ತಿದೆ. ಪರಿಸರ ರಕ್ಷಣೆ ಮತ್ತು ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸಾರಿಗೆ ಇಲಾಖೆ ಹಲವು ದಿಟ್ಟ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲೂ ಸಚಿವ ನಿತಿನ್ ಗಡ್ಕರಿಯಂತು ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಪಟ್ಟು ಹಿಡಿದು ಕೂತಿದ್ದು, ವಿದೇಶಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಯಶಸ್ವಿಯಾಗುವುದಾದರೆ ನಮ್ಮಲ್ಲಿ ಅದ್ಯಾಕೆ ಸಾಧ್ಯವಿಲ್ಲ ಅಂದಿದ್ದಾರೆ.
ಹೀಗಾಗಿ ಮುಂದಿನ ವರ್ಷಗಳಲ್ಲಿ ಪರಿಸರ ಸ್ನೇಹಿ ವಾಹನಗಳು ರಸ್ತೆಗಿಳಿಯುವುದು ಅನಿವಾರ್ಯ. ಒಂದೆಡೆ ಏರುತ್ತಿರುವ ಇಂಧನ ದರ ಮತ್ತೊಂದು ಇಂಧನ ಕೊರತೆ ಮಗದೊಂದು ಕಡೆ ಪರಿಸರ ಮಾಲಿನ್ಯ. ಹೀಗಾಗಿ ಕಾರು ಬೈಕ್ ಉತ್ಪಾದಕ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಒಲವು ತೋರಿಸಲೇಬೇಕಾಗಿದೆ.
ಈ ನಿಟ್ಟಿನಲ್ಲಿ ಸ್ಕೂಟರ್ ಹಾಗೂ ಬೈಕ್ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ TVS ಇದೀಗ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲು ಸಜ್ಜಾಗಿದೆ. ಕ್ರಿಯಾನ್ ಹೆಸರಿನ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ತಯಾರಿ ನಡೆಸಿರುವ TVS ಮುಂದಿನ ವರ್ಷ ಮಾರುಕಟ್ಟೆಗೆ ಪರಿಚಯಿಸಲಿದೆ.

ಕ್ರಿಯಾನ್ ಮಾರುಕಟ್ಟೆಗೆ ಬಂದರೆ ಒಕಿನಾವ ಹಾಗೂ ಎದೆರ್ ಎಲೆಕ್ಟ್ರಿಕ್ ಸ್ಕೂಟರ್‌ಗೆ ಸ್ಪರ್ಧೆ ನೀಡಲಿದೆ.
ಒಂದು ಗಂಟೆಯಲ್ಲಿ ಶೇಕಡಾ 80 ರಷ್ಟು ಬ್ಯಾಟರಿ ಚಾರ್ಜ್ ಆಗಲಿದ್ದು, ಒಂದು ಸಲ ಚಾರ್ಜ್ ಮಾಡಿದರೆ 80 ಕಿ.ಮೀ ಪ್ರಯಾಣಿಸಬಹುದಾಗಿದೆ.

ನೂತನ ಸ್ಕೂಟರ್ ಬೆಲೆ 72,000 ರೂಪಾಯಿಂದ 82,000 ರೂಪಾಯಿ(ಎಕ್ಸ್ ಶೋ ರೂಂ) ಎಂದು ಅಂದಾಜಿಸಲಾಗಿದೆ.
ಈ ಬೈಕ್ ವಿಶೇಷತೆಗಳನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.