ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಸಚಿವರಾದ ಡಾ.ಮಹದೇವಪ್ಪ ಎಚ್ಚರಿಕೆ
ನ್ಯಾಯಾಲಯದ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸಹಕಾರ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯದಲ್ಲಿ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರುವ ಬಗ್ಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಪ್ರಗತಿ ಪರಿಶೀಲಿಸುವಂತೆ ನಿರ್ದೇಶನ ನೀಡಿದರು.
ಸಂವಿಧಾನಾತ್ಮಕ ಹುದ್ದೆಗಳನ್ನು ಭರ್ತಿ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬ ಮತ್ತು ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಡಾ. ಮಹದೇವಪ್ಪ ಎಚ್ಚರಿಕೆ ನೀಡಿದರು.
Discussion about this post