ಬಾಗಲಕೋಟೆ : ಘಟಪ್ರಭಾ ನದಿಯ ಕಾಲುವೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ, ಕಾರಿನಲ್ಲಿದ್ದ ಆರು ಜನರ ಪೈಕಿ, ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಮಹದೇವ ಗೌಡ, ಎರಿತಾತ, ವಿಜಯ್ ಮತ್ತು ಸುನೀಲ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮುಧೋಳದಿಂದ ರಾಮದುರ್ಗದ ಕಡೆಗೆಲ್ಲಿ ತೆರಳುತ್ತಿದ್ದರು ಎಂದು ಗೊತ್ತಾಗಿದೆ.
ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲುವೆಗೆ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಲೋಕಾಪುರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.
Discussion about this post