ಪಶು ವೈದ್ಯೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಂತರ ಭೀತಿಗೊಂಡಿರುವ ಮಹಿಳೆಯರಿಗೆ ರಕ್ಷಣೆಯ ಭರವಸೆ ಕೊಟ್ಟಿರುವ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ ರಾವ್,
ಯಾವುದೇ ಸಮಸ್ಯೆ ಇದ್ದರೂ ತಕ್ಷಣ ಸಹಾಯವಾಣಿ 100ಕ್ಕೆ ಕರೆ ಮಾಡಿ. ಕರೆ ಮಾಡಿದ ಏಳು ಸೆಕೆಂಡ್ ನಲ್ಲಿ ಸ್ವೀಕರಿಸಿ, ನಿಮ್ಮ ಸಮಸ್ಯೆ ಆಲಿಸುತ್ತಾರೆ. ಬೆಂಗಳೂರಿಗರು ಮಾತ್ರವಲ್ಲ ಹೊರಗಿನಿಂದ ಬಂದವರು ಸಹ ಕರೆ ಮಾಡಿ ದೂರು ನೀಡಿದರೆ ತಕ್ಷಣ ಸ್ಪಂದಿಸಲಾಗುವುದು ಅಂದಿದ್ದಾರೆ.
ಇನ್ನು ಸಂಕಷ್ಟದಲ್ಲಿರುವ ಮಂದಿಯ ಜಾಗಕ್ಕೆ ಕೇವಲ 9 ನಿಮಿಷದ ಒಳಗಾಗಿ ನಮ್ಮ ಪೊಲೀಸರು ತಲುಪುವ ಭರವಸೆಯನ್ನು ಕೂಡಾ ಆಯುಕ್ತರು ನೀಡಿದ್ದಾರೆ.
ಮಹಿಳೆಯರು ‘ಸುರಕ್ಷ’ ಆಪ್ ಬಳಸುವಂತೆ ಮನವಿ ಮಾಡಿದ ಆಯುಕ್ತರು, ಕೇವಲ ಮಹಿಳೆಯರು ಮಾತ್ರವಲ್ಲ ಪುರುಷರು ಸಹ ಈ ಆ್ಯಪ್ ಬಳಸಬೇಕು. ನಿಮಗೆ ಸಮಸ್ಯೆ ಆದಾಗ ಆಪ್ ನಿಮಗೆ ಸಹಾಯ ಮಾಡುತ್ತದೆ. ಕೇವಲ ಒಂದು ಬಟನ್ ಒತ್ತುವುದರಿಂದ ಪೊಲೀಸರು ನೀವಿದ್ದ ಸ್ಥಳಕ್ಕೆ ಬರುತ್ತಾರೆ. ಅಲ್ಲದೆ ನಿಮ್ಮ ಮೊಬೈಲ್ ಕ್ಯಾಮೆರಾ ಆನ್ ಅಗುತ್ತೆ, ನಿಮಗೆ ಏನಾಗಿದೆ ಎಂಬುದು ಕಂಟ್ರೋಲ್ ರೂಮ್ ನಲ್ಲಿರುವವರಿಗೆ ತಿಳಿಯುತ್ತದೆ ಅಂದಿದ್ದಾರೆ.
Discussion about this post