ಬೆಂಗಳೂರು : ರಾಜಧಾನಿಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂತು ಅನ್ನುವಷ್ಟರಲ್ಲಿ ಮತ್ತೆ ಪಾಸಿಟಿವ್ ಸಂಖ್ಯೆ ಏರಲಾರಂಭಿಸಿದೆ. ಜೊತೆಗೆ ನಾಗರಿಕರು ಕೂಡಾ ಸೋಂಕು ಮುಚ್ಚಿಡುತ್ತಿದ್ದಾರೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಇದೀಗ ಮನೆ ಮನೆ ಆರೋಗ್ಯ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ವೈದ್ಯರೇ ಮನೆ ಬಾಗಿಲಿಗೆ ಬರಲಿದ್ದಾರೆ. ಈ ನಡುವೆ GKVK ಹಾಸ್ಟೆಲ್ ನ 8 ಮಂದಿ ಯುವತಿಯರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಹಿನ್ನಲೆಯಲ್ಲಿ ಹಾಸ್ಟೆಲ್ ಅನ್ನು ಕಂಟೈನ್ ಮೆಂಟ್ ವಲಯ ಎಂದು ಘೋಷಿಸಲಾಗಿದ್ದು, ಸೋಂಕಿತರನ್ನು ಹಜ್ ಭವನದ ಕೋವಿಡ್ ಕೇರ್ ಸೆಂಟರ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ಹಾಸ್ಟೆಲ್ ನಲ್ಲಿರುವ 350 ವಿದ್ಯಾರ್ಥಿನಿಯರನ್ನೂ ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದ್ದು ಎಲ್ಲರ ವರಿ ನೆಗೆಟಿವ್ ಬಂದಿದೆ. ಹಾಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಏಳು ದಿನಗಳ ಕಾಲ ನಿಗಾ ವಹಿಸಲು ನಿರ್ಧರಿಸಲಾಗಿದೆ.
ಇನ್ನು ಕಾಲೇಜು ಪುನರಾರಂಭದ ಹಿನ್ನಲೆಯಲ್ಲಿ ಕಳೆದ ವಾರ ನಗರಕ್ಕೆ ಬಂದಿದ್ದ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳಲ್ಲಿ ಸೋಂಕಿನ ಲಕ್ಷಣ ಕಾಣಿಸಿಕೊಂಡಿತ್ತು. ಇದಾದ ಬಳಿಕ ಎಲ್ಲಾ ವಿದ್ಯಾರ್ಥಿಗಳನ್ನು ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿತ್ತು.
Discussion about this post