ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಅಗ್ನಿದುರಂತ ಸಂಭವಿಸಿದ್ದು, ಅಗ್ನಿಶಾಮಕ ದಳ ಸಕಾಲಕ್ಕೆ ಸ್ಥಳಕ್ಕೆ ತಲುಪಿದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.
ಅನೇಕಲ್ ತಾಲೂಕಿನ ಎಲೆಕ್ಟ್ರಾನಿಕ್ ಸಿಟಿ-2ನೇ ಹಂತದ ಸಂಪಿಗೆಹಳ್ಳಿಯ ವಸುಂದರ ಲೇಔಟ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿ ಮೇಕ್ಸ್ ಅರ್ಪಾಟ್ಮೆಂಟ್ ಒಂದನೇ ಮಹಡಿಯ ಮನೆಯಲ್ಲಿ ಎಲ್.ಪಿ.ಜಿ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿತ್ತು.
ತಕ್ಷಣ ಎಲೆಕ್ಟ್ರಾನಿಕ್ ಸಿ.ಟಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಸ್ಥಳಕ್ಕೆ ದಾವಿಸಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
Discussion about this post