ಪೊಲೀಸರು ಇದೇ ರೀತಿ ಹೆಡೆ ಮುರಿ ಕಟ್ಟದಿದ್ರೆ ಮುಂದಿನ ದಿನಗಳಲ್ಲಿ ಮನೆಗಳಲ್ಲಿ ವಾಸಿಸೋದು ಕಷ್ಟವಾಗಬಹುದು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಮನೆಗಳ್ಳತನ ಅಪರಾಧ ಪ್ರಕರಣಗಳ ಸಂಖ್ಯೆ ಏರುಮುಖದಲ್ಲಿದೆ. ಒಂದಿಷ್ಟು ತಿಂಗಳ ಕಾಲ ಪೊಲೀಸರ ಭಯದಲ್ಲಿದ್ದ ಕಳ್ಳರು ಕೃತ್ಯಕ್ಕೆ ಕೈ ಹಾಕಿರಲಿಲ್ಲ. ಇದೀಗ ಅದ್ಯಾಕೋ ಕಳ್ಳರಿಗೆ ಪೊಲೀಸರ ಭಯವಿಲ್ಲದಂತಾಗಿದೆ.
ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ತಮ್ಮ ಠಾಣಾ ವ್ಯಾಪ್ತಿಯಲ್ಲಿ ಹಗಲು ವೇಳೆ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಮಂಗಳೂರು ಬೆಂಗ್ರೆ ಭದ್ರಪಳ್ಳಿ ನಿವಾಸಿ ಫರಾಜ್ (27) ಮತ್ತು ಸುರತ್ಕಲ್ ತಾಲೂಕು ಚೊಕ್ಕಬೆಟ್ಟು ಕೃಷ್ಣಾಪುರ 4ನೇ ಬ್ಲಾಕ್ ನ ನಿವಾಸಿ ತೌಸಿಫ್ ಅಹಮ್ಮದ್ (34) ಎಂದು ಗುರುತಿಸಲಾಗಿದೆ.
ಬಂಧಿತರಿಂದ 12,23,000 ಮೌಲ್ಯದ 223ಗ್ರಾಂ ಚಿನ್ನ 3,000 ರೂ ಮೌಲ್ಯದ ಬೆಳ್ಳಿ ವಸ್ತುಗಳು ಮತ್ತು ಕೃತ್ಯಕ್ಕೆ ಬಳಸಿದ ಸುಮಾರು ಮಹೀಂದ್ರ ಝೈಲೋ ಕಾರು ಮತ್ತು ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯ ಈ ಕಾರ್ಯಾಚರಣೆಗೊಂದು ಹ್ಯಾಟ್ಸಾಫ್ ಅನ್ನಲೇಬೇಕು.
Discussion about this post