ದೇಂತಡ್ಕ ದೇವಸ್ಥಾನದಲ್ಲಿ ಮದುವೆಯ ಲೆಕ್ಕ ಚುಕ್ತ ಮಾಡಿ ಬರುವಾಗ ನಡೆದ ದುರ್ಘಟನೆ
ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸ್ಥಳದಲ್ಲೇ ಕೊನೆಯುಸಿರು ಎಳೆದ ದಾರುಣ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಪತಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ
ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ
ಬಿಸಿರೋಡಿನ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಅನಿಶ್ ಅವರ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಗೆ ಗುದ್ದಿದೆ. ಬಳಿಕ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ KSRTC ಬಸ್ ಗೆ ಡಿಕ್ಕಿಯಾಗಿದೆ.
A newly married woman has lost her life while her husband has sustained serious injuries in a horrific car crash at a place called Talapady in Bantwal on the Mangaluru-Bengaluru National Highway on Saturday.