ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಪ್ರಾಯೋಗಿಕ ಯೋಜನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ( ಬಿಬಿಎಂಪಿ ) ವ್ಯಾಪ್ತಿಯಲ್ಲಿ ಪಶ್ಚಿಮ ವಲಯದ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.
ಪಶ್ಚಿಮ ವಲಯದ ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದೆ.
ಮೈಕ್ರೋ ಚಿಪ್ ತಂತ್ರಜ್ಞಾನದಿಂದ ನಾಯಿಯ ವಾಸಸ್ಥಳ, ಲಸಿಕೆ ನೀಡಿದ ದಿನಾಂಕ, ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ದಿನಾಂಕ ಹಾಗೂ ಇನ್ನಿತರ ಅಂಶಗಳನ್ನು ಶಾಶ್ವತವಾಗಿ ಅದರಲ್ಲಿ ಶೇಖರಿಸಿಡಿಸಬಹುದಾಗಿದೆ.
ಮೈಕ್ರೋ ಚಿಪ್ ತಂತ್ರಜ್ಞಾನವನ್ನು ಈಗಾಗಲೇ ಹಲವಾರು ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳಿಗೆ ಅಳವಡಿಸಿಕೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಬಿಜ್ ಆರ್ಬಿಟ್ ಎಂಬ ಸಂಸ್ಥೆಯ ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಬೀದಿ ನಾಯಿಗಳಿಗೆ ಅಳವಡಿಕೆ ಮಾಡಲಾಗುತ್ತಿದೆ.
ಮೈಕ್ರೋಚಿಪ್ ಒಂದು ಅಕ್ಕಿಕಾಳು ಗಾತ್ರದ ಸಾಧನವಾಗಿದ್ದು, ಪ್ರಾಣಿಗಳಲ್ಲಿ ಶಾಶ್ವತ ಗುರುತಿನ ವಿಧಾನವಾಗಿರುತ್ತದೆ. ಇದನ್ನು ಪ್ರಾಣಿಗಳ ಚರ್ಮದ ಕೆಳಗೆ ಇಂಜೆಕ್ಷನ್ ಮೂಲಕ ಇರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Insertion of microchips to stray dogs in Matikere and Malleshwaram falling in the West zone of Bruhat Bengaluru Mahanagara Palike (BBMP) began on Saturday. BBMP in association Bizorbit Technologies Private Limited embarked on insertion of microchips on an experimental basis to gather data such as residing place, date of vaccination, animal birth control conducted date among others.