ಗಣೇಶೋತ್ಸವ ಅಂಗವಾಗಿ ಶಾಂತಿ ಸೌಹಾರ್ದತೆ ಸಭೆ
ಬೆಂಗಳೂರು ನಗರದಲ್ಲಿ ಗಣೇಶೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ(Single Window System) ಅನುಮತಿ ಪತ್ರವನ್ನು ಪಡೆಯಬಹುದಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ತಿಳಿಸಿದರು.
ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಇಂದು ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆದ “ಶಾಂತಿ ಸೌಹಾರ್ದತೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
63 ಏಕಗವಾಕ್ಷಿ ಕೇಂದ್ರಗಳ ವಿಳಾಸ ಹಾಗೂ ಏಕಗವಾಕ್ಷಿ ಕೇಂದ್ರಗಳಲ್ಲಿರುವ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ ನೋಡಲ್ ಅಧಿಕಾರಿಗಳ ವಿವರವಾದ ಮಾಹಿತಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ.
ಅದರನುಸಾರ ಗಣೇಶ ಮೂರ್ತಿಗಳನ್ನಿಡುವವರು ಏಕಗವಾಕ್ಷಿ ಸ್ಥಳಕ್ಕೆ ಭೇಟಿ ನೀಡಿ ಒಂದೇ ಸ್ಥಳದಲ್ಲಿ ಅನುಮತಿ ಪಡೆಯಬಹುದೆಂದು ಹೇಳಿದರು.
As Ganesh Chaturthi approaches next month, a major festival in Bengaluru featuring numerous public Ganeshotsav events, all organisers must secure permission. Bruhat Bengaluru Mahanagara Palike (BBMP) has launched a single-window platform to streamline the permission process.